ಮಡಿಕೇರಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಇದರ ಜಿಲ್ಲಾಧ್ಯಕ್ಷರಾಗಿ ಚಾಮೆರ ದಿನೇಶ್ ಬೆಳ್ಯಪ್ಪ ಅವರನ್ನು ಆಯ್ಕೆಮಾಡಿ ರಾಜ್ಯಧ್ಯಕ್ಷ ಸಿ. ಎನ್. ಅಶೋಕ್ ಆದೇಶಿಸಿದ್ದಾರೆ.
ದೇಶದ ನಾನಾ ರಾಜ್ಯಗಳಲ್ಲಿ ತನ್ನ ಘಟಕಗಳ ಮೂಲಕ ಕಾರ್ಯಕ್ಷೇತ್ರ ಹೊಂದಿರುವ ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ ಒಂದು ರಾಷ್ಟ್ರೀಯ ಸಂಘಟನೆಯಾಗಿದ್ದು, ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಬೆಳೆಸುವ ಜೊತೆಗೆ, ಅವರಲ್ಲಿ ಸೃಜನಶೀಲ ಬೆಳವಣಿಗೆ, ಪರಿಸರ ಸಂರಕ್ಷಣೆ, ಸಹಬಾಳ್ವೆಯ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ದುಡಿಯುತ್ತಿರುವ ಸಂಸ್ಥೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಚಾಮೆರ ದಿನೇಶ್ ಬೆಳ್ಯಪ್ಪ ಅವರ ಸಾಹಿತ್ಯ ಮತ್ತು ಸಾಮಾಜಿಕ ಸೇವೆಯನ್ನು ಗುರುತಿಸಿ, ಸರ್ವ ಸದಸ್ಯರ ಸರ್ವಾನುಮತದಿಂದ ಕೊಡಗು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಿದ್ದು ಮುಂದೆ ಜಿಲ್ಲೆಯ ಮಕ್ಕಳಲ್ಲಿ ಬೆಳವಣಿಗೆಯಾಗಲು ಶ್ರಮಿಸುವಂತೆ ಆಶಿಸಿದ್ದಾರೆ.