ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಿತ್ತು, 01-01 2023 ರಿಂದ 31-12-2023 ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದು, 31-05-2024ಕೊನೆ ದಿನವೆಂದು ಈ ಹಿಂದಿನ ಪ್ರಕಟಣೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದರು. ನಾಡಿನೆಲ್ಲೆಡೆಯಿಂದ ಸಾಹಿತ್ಯಾಸಕ್ತರು, ಬರಹಗಾರರು ಕೊನೆಯ ದಿನವನ್ನು ವಿಸ್ತರಿಸುವಂತೆ ಕೋರಿದ್ದರಿಂದ ಕೊನೆಯ ದಿನವನ್ನು 15-06-2024ರ ವರೆಗೆ ವಿಸ್ತರಿಸಲಾಗಿದ್ದು, ಸಾಹಿತ್ಯಾಸಕ್ತರು ಇದರ ಸದುಪಯೋಗ ಪಡೆದು ಕೊಳ್ಳಬೇಕೆಂದು ತಿಳಿಸಿದ್ದಾರೆ.
2023ನೆಯ ಸಾಲಿನಲ್ಲಿ ಪ್ರಕಟಗೊಂಡಿರುವ ಒಟ್ಟು 53 ವಿವಿಧ ಪುಸ್ತಕಗಳಿಗೆ ದತ್ತಿ ಪುರಸ್ಕಾರಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಅದಕ್ಕಾಗಿ ಅನೇಕ ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಿದ್ದು, ಒಟ್ಟಾರೆ 57ವಿವಿಧ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರತಿ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು, ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು ‘ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-560 018’ ಅವರಿಗೆ ಕಳುಹಿಸಬೇಕು. ಉಳಿದ ನಿಯಮಗಳೆಲ್ಲವೂ ಈ ಹಿಂದೆ ತಿಳಿಸಿದಂತೆಯೇ ಇರುತ್ತವೆ.
ಪ್ರತಿ ಪುಸ್ತಕ ದತ್ತಿ ಪ್ರಶಸ್ತಿಗಳಿಗೂ ತಲಾ ಮೂರು ಪ್ರತಿಗಳನ್ನು ಕಳುಹಿಸಬೇಕು., ಪುಸ್ತಕ ದತ್ತಿ ಪ್ರಶಸ್ತಿಗೆ ಪುಸ್ತಕಗಳನ್ನು ಕಳುಹಿಸುವವರು ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವವನ್ನು ಹೊಂದಿರಬೇಕು. ಪುಸ್ತಕ ಕಳುಹಿಸುವಾಗ ತಮ್ಮ ಸದಸ್ಯತ್ವ ಸಂಖ್ಯೆಯನ್ನು ನಮೂದಿಸಿ ಕಳುಹಿಸಬೇಕು. ಒಂದು ವೇಳೆ ಇನ್ನೂ ಸದಸ್ಯರಾಗಿರದಿದ್ದಲ್ಲಿ ಪರಿಷತ್ತಿನ ಆಜೀವ ಸದಸ್ಯತ್ವವನ್ನು ಪಡೆದುಕೊಂಡು ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದು. ದತ್ತಿಯ ವಿವರಗಳಿಗಾಗಿ ಐದು ರೂಪಾಯಿಯ ಅಂಚೆ ಚೀಟಿಯನ್ನು ಲಗತ್ತಿಸಿದ ಕವರ್ ಅನ್ನು ಕನ್ನಡ ಸಾಹಿತ್ಯ ಪರಿಷತ್ತಿಗೆ ಕಳುಹಿಸಿ ವಿವರಗಳನ್ನು ಪಡೆಯಬಹುದು ಇಲ್ಲದಿದ್ದರೆ ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣಗಳಾದ
ಫೇಸ್ ಬುಕ್ : https://www.facebook.com/kasapaofficial
https://www.facebook.com/KannadaSahityaParishattu
ಟ್ವಿಟರ್ : https://twitter.com/kannadaparishat
ಕೂ ಆಪ್ : https://www.kooapp.com/profile/kasapa
ಇನ್ ಸ್ಟಾಗ್ರಾಮ್ : https://www.instagram.com/kannadasahityaparishattu
ವೆಬ್ ಸೈಟ್ : https://kannadasahithyaparishattu.in
www.kasapa.in ಅಥವಾ ದೂರವಾಣಿ ಸಂಖ್ಯೆ 080-26612991/26623584 ಇವುಗಳ ಮೂಲಕವೂ ಮಾಹಿತಿಯನ್ನು ಪಡೆಯಬಹುದಾಗಿದೆ.