ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ಇದರ ವತಿಯಿಂದ 2023ನೇ ಸಾಲಿನ ವಿವಿಧ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 21 ಮಾರ್ಚ್ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಇವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಕೆ.ಆರ್.ಐ.ಡಿ.ಎಲ್. ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಬಸವರಾಜು ಇವರು ಈ ಸಮಾರಂಭದ ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ. ಎಲ್.ಎನ್. ಮುಕುಂದ ರಾಜ್ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ಟ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು 2023ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟವಾದ ಕೃತಿಗಳನ್ನು ವಿವಿಧ ಪುಸ್ತಕ ದತ್ತಿ ಪುರಸ್ಕಾರಗಳಿಗೆ ಬರಹಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿತ್ತು. ಇದಕ್ಕೆ ರಾಜ್ಯ, ದೇಶ ಮತ್ತು ವಿದೇಶಗಳಿಂದಲೂ ನಾಲ್ಕು ಸಾವಿರ ಕೃತಿಗಳು ಬಂದಿದ್ದು, ಅವುಗಳಲ್ಲಿ ನಾಡೋಜ ಡಾ. ಮಹೇಶ ಜೋಶಿಯವರ ನೇತೃತ್ವದ 12 ಜನ ಪರಿಣಿತರ ಸಮಿತಿ ಪ್ರಾಥಮಿಕವಾಗಿ ಆಯ್ಕೆ ಮಾಡಿದ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.