ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಗೋಣಿಕೊಪ್ಪಲು ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ದಿ. ಸಂಪಾಜೆ ಸಣ್ಣಯ್ಯ ಪಟೇಲ್ ದತ್ತಿನಿಧಿ ಮತ್ತು ಶ್ರೀಮತಿ ದಿ.ಪುಟ್ಟಮ್ಮ ಮತ್ತು ದಿ. ಹೆಬ್ಬಾಲೆ ನಂಜಾಚಾರ್ ಜ್ಞಾಪಕಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವು ಗೋಣಿಕೊಪ್ಪಲು ಪ್ರೌಢಶಾಲಾ ಸಭಾಂಗಣದಲ್ಲಿ ದಿನಾಂಕ 11 ಸೆಪ್ಟೆಂಬರ್ 2024ರಂದು ಬೆಳಿಗ್ಗೆ 10-00 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ ವಹಿಸಲಿದ್ದು , ಕಾರ್ಯಕ್ರಮವನ್ನು ಗೋಣಿಕೊಪ್ಪಲು ಪ್ರೌಢಶಾಲೆಯ ಕಾರ್ಯದರ್ಶಿಗಳಾದ ಕುಪ್ಪಂಡ ತಿಮ್ಮಯ್ಯ ಇವರು ನೆರವೇರಿಸಲಿದ್ದಾರೆ. ಪ್ರಾಸ್ತಾವಿಕವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ನುಡಿಯಲಿದ್ದಾರೆ.
ದತ್ತಿಯ ಆಶಯದಂತೆ ‘ಗ್ರಾಮೀಣ ಜಾನಪದ ಸೊಗಡು’ ಕುರಿತು ನಿವೃತ್ತ ಅದ್ಯಾಪಕಿ ಶ್ರೀಮತಿ ಎಚ್.ಜಿ. ಸಾವಿತ್ರಿ ಮತ್ತು ‘ಸಮಾಜಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆ’ ಕುರಿತು ನಿವೃತ್ತ ಪ್ರಾಂಶುಪಾಲರಾದ ಡಾ. ಜೆ. ಸೋಮಣ್ಣ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ಟಿ. ರತೀಶ್ ರೈ, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ, ದತ್ತಿದಾನಿಗಳಾದ ಹೆಬ್ಬಾಲೆ ಗ್ರಾಮದ ಹೆಚ್.ಎನ್. ಸುಬ್ರಹ್ಮಣ್ಯ ಉಪಸ್ಥಿತರಿರುತ್ತಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಐ ಮುನೀರ್ ಅಹ್ಮದ್ ತಿಳಿಸಿದ್ದಾರೆ.