ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಆಶ್ರಯದಲ್ಲಿ ಎ.ಆರ್. ಡಿಸೋಜ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 18 ಡಿಸೆಂಬರ್ 2024ರಂದು ಅಪರಾಹ್ನ 2-00 ಗಂಟೆಗೆ ಮಂಗಳೂರಿನ ಗೋರಿಗುಡ್ಡೆಯ ಕಿಟೆಲ್ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಡಾ. ಮಂಜುನಾಥ ಎಸ್. ರೇವಣ್ಕರ್ ಇವರು ವಹಿಸಲಿದ್ದು, ಯೇನಪೋಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕಿ ಡಾ. ದೀಕ್ಷಿತಾ ಪ್ರಶಾಂತ್ ಇವರು ‘ಕರ್ನಾಟಕ ಕ್ರೈಸ್ತರ ಇತಿಹಾಸ, ಕನ್ನಡ ಸಾಹಿತ್ಯಕ್ಕೆ ಕ್ರೈಸ್ತರ ಕೊಡುಗೆ ಹಾಗೂ ಕ್ರೈಸ್ತ ಸಾಹಿತ್ಯ ಪರಂಪರೆ’ ಎಂಬ ವಿಷಯದ ಬಗ್ಗೆ ದತ್ತಿ ಉಪನ್ಯಾಸ ನೀಡಲಿದ್ದಾರೆ.