Subscribe to Updates

    Get the latest creative news from FooBar about art, design and business.

    What's Hot

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಎರಡನೇ ದಿನದ ಕಾರ್ಯಕ್ರಮ

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ‘ಚಿಣ್ಣರ ಬಣ್ಣದ ಹಬ್ಬ – 2025’
    Competition

    ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ‘ಚಿಣ್ಣರ ಬಣ್ಣದ ಹಬ್ಬ – 2025’

    January 15, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಮತ್ತು ಅವರ ಪತ್ನಿ ಶ್ರೀಮತಿ ಸರಸ್ವತೀ ಜಿ. ರಾವ್ ತಮ್ಮ ಮಗಳು ಪಾವನಿಯ ಹತ್ತನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಉಡುಪಿ ಜಿಲ್ಲೆಯ 1ರಿಂದ 9ನೇ ತರಗತಿವರೆಗೆ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಚಿಣ್ಣರ ಬಣ್ಣದ ಹಬ್ಬ – 2025’ ಚಿತ್ರಕಲಾ ಸ್ಪರ್ಧೆಯು ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ದಿನಾಂಕ 12 ಜನವರಿ 2025 ಭಾನುವಾರ ಜರಗಿತು.

    ಸುಮಾರು 300 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ತರಗತಿವಾರು ಪ್ರಥಮ (ರೂ.2000), ದ್ವಿತೀಯ (ರೂ.1500), ತೃತೀಯ (ರೂ.1000) ಮತ್ತು ಎರಡು ಸಮಾಧಾನಕರ (ತಲಾ ರೂ.500) ಸೇರಿದಂತೆ ಒಟ್ಟು 45 ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಪುಸ್ತಕ ಸ್ಮರಣಿಕೆಯನ್ನು ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ. ಜೆ.ಎನ್. ಭಟ್ ಮತ್ತು ಡಾ. ವಿರೂಪಾಕ್ಷ ದೇವರಮನೆ ವಿದ್ಯಾರ್ಥಿ ಪೋಷಕರಿಗೆ ಆರೋಗ್ಯದ ಮತ್ತು ಮಕ್ಕಳನ್ನು ಬೆಳೆಸುವ ಕುರಿತು ಉಪಯುಕ್ತ ಸಲಹೆ ನೀಡಿದರು. ರಮೇಶ್ ರಾವ್, ಎಚ್. ಜನಾರ್ದನ್ ರಾವ್, ನಟರಾಜ ಉಪಾಧ್ಯ, ಗಾಯತ್ರಿ ನಾಯಕ್ ಸ್ಪರ್ಧೆಯ ನಿರ್ಣಾಯಕರಾಗಿ ಸಹಕರಿಸಿದರು.

    ಸಮಾರೋಪ ಸಮಾರಂಭದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಶ್ರೀ ಟಿ. ಶ್ರೀಧರ್ ರಾವ್ ಮತ್ತು ಅವರ ಪತ್ನಿ ಶ್ರೀಮತಿ ಕುಸುಮ ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ಕೆ. ಬಾಲಕೃಷ್ಣ ರಾವ್, ಗೋಪಿಕೃಷ್ಣ ರಾವ್, ಯು.ಎಸ್. ರಾಜಗೋಪಾಲ ಆಚಾರ್ಯ, ಶ್ರೀಮತಿ ಬಿ.ಜಿ. ಶಶಿರೇಖಾ, ಶ್ರೀಮತಿ ಹೆಲೆನ್ ಸಾಲಿನ್ಸ್ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಕಾರ್ಯಕರ್ತರು ಮತ್ತು ವಿದ್ಯಾಪೋಷಕ್ ವಿದ್ಯಾರ್ಥಿಗಳು ಕಾರ್ಯಕ್ರಮ ಆಯೋಜಿಸುವಲ್ಲಿ ಸಹಕರಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

    drawing
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದಿಂದ ‘ಶಾಂಭವಿ ವಿಲಾಸ’ ತಾಳಮದ್ದಳೆ
    Next Article ಯಕ್ಷಬೊಳ್ಳಿ ಕಡಬ ದಿನೇಶ್ ರೈಯವರ ಕಲಾಯಾನದ ರಜತ ಸಂಭ್ರಮದ ಪ್ರಯುಕ್ತ ‘ಬೊಳ್ಳಿ ಪರ್ಬ – 25’ | ಜನವರಿ 22
    roovari

    Add Comment Cancel Reply


    Related Posts

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಉಡುಪಿಯಲ್ಲಿ ‘ಜನಪದ’ ದೇಶೀಯ ಕಲೆಗಳ ಸರಣಿ ಕಾರ್ಯಾಗಾರ | ಫೆಬ್ರವರಿ 28 ಮತ್ತು ಮಾರ್ಚ್ 01

    February 25, 2026

    ‘ಮಹಾಶ್ವೇತಾದೇವಿ ಜನ್ಮ ಶತಮಾನೋತ್ಸವ ಪ್ರಶಸ್ತಿ’ಗೆ ಕಥಾಸಂಕಲನ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 25

    February 23, 2026

    ಶಿವಪಾಡಿ ವೈಭವದಲ್ಲಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ‘ನರ್ತನ 2026’

    February 18, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.