ಮೂರ್ನಾಡು : ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲೆ, ಮಡಿಕೇರಿ ತಾಲೂಕು ಘಟಕ, ಮೂರ್ನಾಡು ಹೋಬಳಿ ಘಟಕ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ, ಮೂರ್ನಾಡು ಪಿ.ಎಂ.ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಮೂರ್ನಾಡು ಹೋಬಳಿ ಘಟಕದ ವಿವಿಧ ಸಂಘ ಸಂಸ್ಥೆಗಳು ಇವರುಗಳ ಸಹಯೋಗದಲ್ಲಿ 7ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ.ವರೆಗಿನ ಮಕ್ಕಳಿಗೆ ‘ಚಿನ್ತನೆ ಚಲನೆ’ 10 ದಿನಗಳ ಉಚಿತ ಬೇಸಿಗೆ ಶಿಬಿರವನ್ನು ದಿನಾಂಕ 12 ಮೇ 2025ರಿಂದ 22 ಮೇ 2025ರವರೆಗೆ ಮೂರ್ನಾಡು ಪಿ.ಎಂ.ಶ್ರೀ. ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ.
ಪ್ರತಿದಿನ ಬೆಳಗ್ಗೆ 9-30 ಗಂಟೆಯಿಂದ ಮಧ್ಯಾಹ್ನ 1-00 ಗಂಟೆ ತನಕ ನಡೆಯುವ ಈ ಶಿಬಿರದಲ್ಲಿ ಕನ್ನಡದ ಮಹತ್ವ, ಜಾನಪದ ಮಹತ್ವ, ಸಿನಿಮಾ ಪ್ರಪಂಚ, ಕೊಡಗಿನ ಸಾಮಾನ್ಯ ಜ್ಞಾನ, ಮಕ್ಕಳ ಮುಂದಿನ ಭವಿಷ್ಯ ಹಾಗೂ ವೃತ್ತಿಪರತೆ ಬಗ್ಗೆ ಚರ್ಚೆ, ಕೊನೆಯ ದಿನ ಕಲಿಕೆಯ ಎಲ್ಲಾ ವಿಷಯಗಳ ಬಗ್ಗೆ ಸ್ಪರ್ಧೆಗಳನ್ನು ನಡೆಸಲಾಗುವುದು.