ಕಾಸರಗೋಡು : ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ದಿನಾಂಕ 04 ನವೆಂಬರ್ 2025ರಂದು ನಡೆದ ಶಿವರಾಮ ಕಾಸರಗೋಡು ಇವರ 60ನೇ ಜನ್ಮವರ್ಷಾಚರಣೆಯ ಸಂಭ್ರಮದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಶ್ರೀಯುತರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ದ. ಕ. ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹರೀಶ ಸುಲಾಯ ಒಡ್ಡಂಬೆಟ್ಟು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾ. ಸುರೇಶ ನೆಗಳಗುಳಿ, ಕಾಸರಗೋಡು ಗಡಿನಾಡು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಜಯಪ್ರಕಾಶ್ ತೊಟ್ಟೆತ್ತೋಡಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸಿ. ಸೋಮಶೇಖರ್, ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಸ್ಥಾಪಕ ಅಧ್ಯಕ್ಷರಾದ ಕೆ.ಪಿ. ಮಂಜುನಾಥ ಸಾಗರ್ ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು. ಬಳಿಕ ಡಾ. ಸುರೇಶ ನೆಗಳಗುಳಿ ಅಧ್ಯಕ್ಷತೆಯಲ್ಲಿ ಹದಿನಾಲ್ಕು ಭಾಷೆಗಳ ಬಹುಭಾಷಾ ಕವಿಗೋಷ್ಠಿ ಸಂಪನ್ನವಾಯಿತು.

