ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ನಾಗರಿಕ ಸಲಹಾ ಸಮಿತಿ (ರಿ.) ಸುರತ್ಕಲ್ ಈ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 03 ಮೇ 2026ರಂದು ಸುರತ್ಕಲ್ಲಿನ ನಾಗಬನ ರೋಡ್ ಇಲ್ಲಿರುವ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಜೆ 5-00 ಗಂಟೆಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ಉಡುಪಿಯ ಸುಮೇಧಾ ರಾವ್ ಇವರ ಹಾಡುಗಾರಿಕೆಗೆ ಉಡುಪಿಯ ಶ್ರೀರಾಗ್ ಪಿ. ರಾವ್ ಇವರು ವಯೋಲಿನ್ ಮತ್ತು ಉಡುಪಿಯ ಪ್ರಜ್ಞಾನ್ ನಾಯಕ್ ಇವರು ಮೃದಂಗಂನಲ್ಲಿ ಸಾಥ್ ನೀಡಲಿದ್ದಾರೆ. 6-00 ಗಂಟೆಗೆ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆ ಸಿಂಚನಾ ಎಸ್. ಕುಲಾಲ್ ಇವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ. ಸನಾತನ ನಾಟ್ಯಾಲಯದ ನಿರ್ದೇಶಕರಾದ ಚಂದ್ರಶೇಖರ್ ಕೆ. ಶೆಟ್ಟಿ ಇವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಮಣಿ ಕೃಷ್ಣಸ್ವಾಮಿ ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

