ಹೆಬ್ರಿ : ಅಂಬಾತನಯ ಮುದ್ರಾಡಿಯವರ ಪತ್ನಿ, ಮಕ್ಕಳು ಮತ್ತು ಕುಟುಂಬಿಕರು ಇವರ ವತಿಯಿಂದ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ ಕಾರ್ಯಕ್ರಮವು ದಿನಾಂಕ 25-05-2024ರಂದು ಅಪರಾಹ್ನ 3-00 ಗಂಟೆಗೆ ಮುದ್ರಾಡಿ ಶಾಲಾ ವಠಾರದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರಿನ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ವಹಿಸಲಿದ್ದು, ಉಡುಪಿಯ ಯಕ್ಷಗಾನ ಕಲಾರಂಗ ಇದರ ಕಾರ್ಯದರ್ಶಿಯಾದ ಶ್ರೀ ಮುರಳಿ ಕಡೆಕಾರ್ ಇವರು ಪ್ರಸಿದ್ಧ ಸಾಹಿತಿ, ಹರಿದಾಸ, ಅರ್ಥಧಾರಿ, ಪ್ರವಚನಕಾರ ಮತ್ತು ಚಿಂತಕರಾಗಿದ್ದ ಅಂಬಾತನಯ ಮುದ್ರಾಡಿಯವರ ಸಂಸ್ಮರಣೆ ಮತ್ತು ಅಭಿನಂದನಾ ನುಡಿಗಳನ್ನಾಡಲಿರುವರು. ಹಿರಿಯ ಸ್ತ್ರೀ ವೇಷಧಾರಿ ಡಾ. ಕೋಳ್ಯೂರು ರಾಮಚಂದ್ರ ರಾವ್ ಇವರಿಗೆ ‘ಅಂಬಾತನಯ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ರುಕ್ಮಾಂಗದ ಚರಿತ್ರೆ’ ಎಂಬ ಪ್ರಸಂಗದ ತಾಳಮದ್ದಳೆ ಪ್ರಸ್ತುತಗೊಳ್ಳಲಿದೆ.