ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಅಹಲ್ಯಾಬಾಯಿ ಹೋಳ್ಕರ್ ವೇದಿಕೆಯಲ್ಲಿ ನಡೆದ ಎರಡು ದಿನದ ‘ಕನಸುಗಳು-2024’ ಕಾರ್ಯಕ್ರಮದ ಸಮಾರೋಪ ಸಮಾರಂಭ ದಿನಾಂಕ 16 ನವೆಂಬರ್ 2024ರಂದು ನಡೆಯತು.


ಇನ್ನೋರ್ವಮುಖ್ಯ ಅತಿಥಿ ಲೇಬಲ್ ಫ್ಯೂಸ್ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಚಂದನ್ ಶ್ರೀಧರ್ ಮಾತನಾಡಿ “ವಿದ್ಯಾರ್ಥಿಯಾಗಿದ್ದಾಗ ಅಧ್ಯಾಪಕರು ಹೇಳಿ ಕೊಟ್ಟ ಪಾಠಗಳು ಇಂದಿಗೂ ತನ್ನನ್ನು ಕೈ ಹಿಡಿದು ಮುನ್ನಡೆಸುತ್ತಿವೆ, ಹಾಗಾಗಿ ಗುರಿಯ ಕಡೆಗೆ ಹೆಜ್ಜೆ ಇಡುವಂತೆ ಮಾಡಿದ ಗುರುಗಳಿಗೆ ನಾವು ಚಿರಋಣಿಯಾಗಿರಬೇಕು.” ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಕೋಶಾಧಿಕಾರಿಗಳಾದ ಸಚಿನ್ ಶೆಣೈ ಮಾತನಾಡಿ ಸ್ಪರ್ಧೆಗಳಲ್ಲಿ ಭಾಗವಹಿಸುವಾಗ ಸಾಮಾನ್ಯವಾಗಿ ವಿದ್ಯಾರ್ಥಿಗಳು ಗೆಲುವನ್ನು ಮಾತ್ರವೇ ಬಯಸುತ್ತಾರೆ, ಆದರೆ ಫಲಿತಾಂಶದ ಬಗ್ಗೆ ಚಿಂತಿಸುವುದಕ್ಕಿಂತ ಭಾಗವಹಿಸುವಿಕೆ ತುಂಬಾ ಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳು ತಾವು ಪಡೆದ ಅನುಭವಗಳಿಂದ ಧನಾತ್ಮಕವಾಗಿ ಬೆಳೆಯಬೇಕು.” ಎಂದು ಹಿತನುಡಿದರು.
ಇದೇ ಸಂದರ್ಭದಲ್ಲಿ ಎರಡು ದಿನಗಳಲ್ಲಿ ನಡೆದ 17 ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿದ ಶಾಲಾ ತಂಡಗಳನ್ನು ಗುರುತಿಸಲಾಯಿತು.

ಕಾರ್ಯಕ್ರಮದಲ್ಲಿ ವಿವೇಕಾನಂದ ವಸತಿ ನಿಲಯಗಳ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಪ್ರಭು ಹಾಗೂ ವಿವೇಕಾನಂದ ಪದವಿಪಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ .ಪಿ, ವಿವೇಕಾನಂದ ಪದವಿಪಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ, ಉಪಪ್ರಾಂಶುಪಾಲರಾದ ಯಂ. ದೇವಿಚರಣ್ ರೈ ಉಪಸ್ಥಿತರಿದ್ದರು. ಉಪನ್ಯಾಸಕಿ ದಯಾಮಣಿ ಟಿ. ಕೆ. ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಶರ್ಮಿಳಾ ನಿರೂಪಿಸಿ, ಉಪನ್ಯಾಸಕಿ ಪುಷ್ಪಲತಾ ವಂದಿಸಿದರು.