ಕಿನ್ನಿಗೋಳಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮುಲ್ಕಿ ತಾಲೂಕು ಘಟಕ ಹಾಗೂ ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಸಾಹಿತಿ ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಜೊತೆ ಮಾತು–ಕತೆ ಕಾರ್ಯಕ್ರಮವನ್ನು ದಿನಾಂಕ 30 ಮಾರ್ಚ್ 2025ರಂದು ಸಂಜೆ ಗಂಟೆ 3-55ಕ್ಕೆ ಕಿನ್ನಿಗೋಳಿಯ ಎಳತ್ತೂರು ಗುತ್ತಿನಲ್ಲಿ ಆಯೋಜಿಸಲಾಗಿದೆ.
ಗುತ್ತಿನಾರ್ ಬಾಲಕೃಷ್ಣ ಯಾನೆ ಶಂಕರ ರೈ ಇವರ ಗೌರವ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಾಹಿತಿ ಜನಪದ ವಿದ್ವಾಂಸ ಕೆ. ಎಲ್. ಕುಂಡಂತಾಯ ಮತ್ತು ಮೂಡಬಿದ್ರೆ ತಾಲೂಕು ಕ.ಸಾ.ಪ.ದ ಕಾರ್ಯದರ್ಶಿ ಡಾ. ಸುಧಾರಾಣಿ ಇವರಿಂದ ಡಾ. ಇಂದಿರಾ ಹೆಗ್ಗಡೆ ಜೊತೆ ಮಾತುಕತೆ ನಡೆಯಲಿದೆ. ಲಾವಣ್ಯ ಶೆಟ್ಟಿಯವರಿಂದ ಡಾ. ಇಂದಿರಾ ಹೆಗ್ಗಡೆಯವರ ಕವನಗಳ ಗಾಯನ ಪ್ರಸ್ತುತಗೊಳ್ಳಲಿದೆ.