ಕಾರ್ಕಳ : ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನ ಇದರ ವತಿಯಿಂದ ‘ಕ್ರಿಯೇಟಿವ್ ಪುಸ್ತಕ ಧಾರೆ 2025’ ಸಮಾರಂಭವನ್ನು ದಿನಾಂಕ 13 ಆಗಸ್ಟ್ 2025ರಂದು ಬೆಳಿಗ್ಗೆ 11-00 ಗಂಟೆಗೆ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸಪ್ತಗಿರಿ ಕ್ಯಾಂಪಸ್ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಗಳಾಗಿ ಚಿತ್ರ ನಿರ್ದೇಶಕರಾದ ಡಾ. ನಾಗತಿಹಳ್ಳಿ ಚಂದ್ರಶೇಖರ್ ಮತ್ತು ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಇವರುಗಳು ಭಾಗವಹಿಸಲಿದ್ದು, ಅಪರಾಹ್ನ 2-00 ಗಂಟೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಖ್ಯಾತ ನಿರೂಪಕರಾದ ಅವಿನಾಶ್ ಕಾಮತ್ ಇವರು ಸಂವಾದಕರಾಗಿ ಮತ್ತು ಜೀ ಸರಿಗಮಪ ಖ್ಯಾತಿಯ ಯಶವಂತ್ ಎಂ.ಜಿ. ಇವರಿಂದ ಗಾಯನ ಪ್ರಸ್ತುತಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದಿಂದ 22 ಕೃತಿಗಳು ಅನಾವರಣಗೊಳ್ಳಲಿವೆ. ಹೆಚ್ಚಿನ ಮಾಹಿತಿಗಳ 96064 74296 ಸಂಖ್ಯೆಯನ್ನು ಸಂಪರ್ಕಿಸಿರಿ.