Subscribe to Updates

    Get the latest creative news from FooBar about art, design and business.

    What's Hot

    ಕತೆ | ‘ದಶರಥ’

    June 26, 2025

    ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ

    June 26, 2025

    ಯಕ್ಷಶಿಕ್ಷಣ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆ

    June 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾರ್ಕಳದಲ್ಲಿ ಕ್ರಿಯೇಟಿವ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    Book Release

    ಕಾರ್ಕಳದಲ್ಲಿ ಕ್ರಿಯೇಟಿವ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    January 8, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ದಿನಾಂಕ 03 ಜನವರಿ 2025ರಂದು ಕ್ರಿಯೇಟಿವ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು.

    ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿ ಮಾನವ ಸಂಪನ್ಮೂಲ ಇಲಾಖೆಯ ಉಪಪ್ರಧಾನ ವ್ಯವಸ್ಥಾಪಕರಾದ ಶ್ರೀ ಗೋಪಾಲಕೃಷ್ಣ ಸಾಮಗ ಬಿ. ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ “ಜ್ಞಾನಾರ್ಜನೆಯ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿಯನ್ನು ರೂಢಿಸಿಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯ” ಎಂದು ಹೇಳಿದರು.

    ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್‌.ರವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಾಗಿ ಬಂದ ಸಾಧನೆಯ ಹಾದಿಯ ಸಮಗ್ರ ಮಾಹಿತಿಗಳನ್ನು ಒದಗಿಸಿದರು. ಮುಖ್ಯ ಅತಿಥಿ ಎನ್.ಸಿ.ಎಸ್. ಮತ್ತು ಕೋ. ಇದರ ಸ್ಥಾಪಕರಾದ ಅಂ. ನಿತೇಶ್ ಶೆಟ್ಟಿಯವರು ಮಾತನಾಡಿ “ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮತ್ತು ಇದು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು” ಎಂದರು.

    ಪ್ರಧಾನ ಶಿಲ್ಪಿಗಳಾದ ಸುನಿಲ್ ಕುಮಾರ್ ಇವರು ಮಾತನಾಡಿ “ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಕ್ಕಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಹಕಾರಿ” ಎಂದರು. ಹಿರ್ಗಾನ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿರವರು ಮಾತನಾಡುತ್ತಾ “ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು” ಎಂದು ಹೇಳಿದರು. ಸಹ ಸಂಸ್ಥಾಪಕರಾದ ಅಮೃತ್‌ ರೈರವರು ಅಧ್ಯಕ್ಷೀಯ ನುಡಿಗಳನ್ನಾಡುತ್ತಾ ಕ್ರಿಯೇಟಿವ್‌ ಕಾಲೇಜಿನ ಉನ್ನತಿಗೆ ಸಹಕರಿಸಿದವರನ್ನು ಸ್ಮರಿಸಿದರು. ವಿದ್ಯೆಯ ಜೊತೆಗೆ ಗುಣ ನಡತೆಯೂ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ಈ ಸಂದರ್ಭದಲ್ಲಿ ಕಾಲೇಜಿನ ತ್ರೈಮಾಸಿಕ ಪತ್ರಿಕೆ ‘ನಿನಾದ’ – 10ನೇ ಸಂಚಿಕೆ ಹಾಗೂ ವಾರ್ಷಿಕ ಸಂಚಿಕೆ ‘ಸಪ್ತಸ್ವರ’ವನ್ನು ಬಿಡುಗಡೆಗೊಳಿಸಲಾಯಿತು. ಶ್ರೀ ಗೋಪಾಲಕೃಷ್ಣ ಸಾಮಗರನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡಾಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾಕ್ಷೇತ್ರದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

    ವೇದಿಕೆಯಲ್ಲಿ ಸಂಸ್ಥೆಯ ಸಪ್ತ ಸಂಸ್ಥಾಪಕರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಕ್ರಿಯೇಟಿವ್‌ ಯಕ್ಷರಾಧನಂ ಹವ್ಯಾಸಿ ಕಲಾವಿದರಿಂದ ‘ವಿದ್ಯಾಮಾತೆ ಶ್ರೀ ಶಾರದೆ ಲೀಲಾಮಾನುಷ ವಿಗ್ರಹ’ ಯಕ್ಷಗಾನ ಪ್ರಸಂಗ ನೆರವೇರಿತು. ಬೋಧಕ – ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು. ಜೀವಶಾಸ್ತ್ರ ಉಪನ್ಯಾಸಕ ಲೋಹಿತ್‌ ಎಸ್.ಕೆ. ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ
    Next Article ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯಿಂದ ‘ನಲ್ವತ್ತರ ನಲಿವು -1’ ಉದ್ಘಾಟನಾ ಸಮಾರಂಭ
    roovari

    Add Comment Cancel Reply


    Related Posts

    ಕತೆ | ‘ದಶರಥ’

    June 26, 2025

    ಕುಶಾಲನಗರದ ಪಾತಿಮಾ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಸೂದನ ರಾಘವಯ್ಯ ದತ್ತಿನಿಧಿ ಉಪನ್ಯಾಸ

    June 26, 2025

    ಅಂಬುರುಹ ಯಕ್ಷ ಕಲಾ ಕೇಂದ್ರ (ರಿ.) ಇದರ ಸಪ್ತಮ ಸಂಭ್ರಮ | ಜೂನ್ 28 ಮತ್ತು 29

    June 26, 2025

    ಕುಪ್ಪಳ್ಳಿಯಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಹಾಗೂ ‘ಶರಣ ಸಂಕುಲ ರತ್ನ ರಾಜ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.