ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಶಾಖೆ ಮತ್ತು ಆರ್ಟ್ ಕೆನರಾ ಟ್ರಸ್ಟ್ ಇದರ ಸಹಯೋಗದೊಂದಿಗೆ ಸಾಂಸ್ಕೃತಿಕ ಸಂವಾದವನ್ನು ದಿನಾಂಕ 26 ಜುಲೈ 2025ರಂದು ಸಂಜೆ 5-30 ಗಂಟೆಗೆ ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
‘ರಾಮ ಭೀಮ ಸೋಮ’ ಆಧುನಿಕ ಕರ್ನಾಟಕದ ಸಾಂಸ್ಕೃತಿಕ ಸಂಶೋಧನೆಗಳು : ಶ್ರೀಕರ್ ರಾಘವನ್ ಇವರ ಹೊಸ ಪುಸ್ತಕದ ಕುರಿತು ಲೇಖಕರೊಂದಿಗೆ ಸಂವಾದ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸುಭಾಸ್ ಬಸು 87623 68048 ಮತ್ತು ದೀಕ್ಷಿತ್ ಆರ್. ಪೈ 90376 33977 ಇವರನ್ನು ಸಂಪರ್ಕಿಸಿರಿ.