ಕಟೀಲು : ಇಲ್ಲಿನ ಸಮೀಪದ ಜುಮಾದಿಗುಡ್ಡೆ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಸಾನಿಧ್ಯವೃದ್ಧಿಗೆ ಭಜನಾ ಕಾರ್ಯಕ್ರಮ ಹಾಗೂ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ದಿನಾಂಕ 29-10-2023ರಂದು ನಡೆಯಿತು. ಕಟೀಲು ಶ್ರೀ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ದೀಪ ಬೆಳಗಿಸಿ ಆಶೀರ್ವಚನ ನೀಡಿ, “ಧಾರ್ಮಿಕ ಕಾರ್ಯಕ್ರಮಗಳಿಂದ ಎಳೆಯ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಸಂಸ್ಕೃತಿ ಬೆಳೆಯುವುದರ ಜೊತೆಗೆ ಗ್ರಾಮದ ಅಭಿವೃದ್ಧಿಯೂ ಸಾಧ್ಯ” ಎಂದರು.
ದೇವಸ್ಥಾನದ ಅರ್ಚಕರಾದ ರಾಜ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಯಕ್ಷಗಾನ, ತಾಳಮದ್ದಳೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಸೀತಾರಾಮ ಶೆಟ್ಟಿ ಸುರಗಿರಿ, ಕೊಡೆತ್ತೂರು ಅರಸು ಕುಂಜುರಾಯ ದೈವಸ್ಥಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಪ್ರೇಮ್ ರಾಜ್ ಶೆಟ್ಟಿ, ಸಂಜೀವ ಮಡಿವಾಳ, ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಸಂಘಟಕ ಯಕ್ಷಗಾನ ಕಲಾವಿದ ಸೀತಾರಾಮ್ ಕುಮಾರ್ ಕಟೀಲು ಮತ್ತಿತರರು ಉಪಸ್ಥಿತರಿದ್ದರು. ಪ್ರಕಾಶ್ ಆಚಾರ್ಯ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.