ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಸಮೂಹ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ 09ರ ಕಾರ್ಯಕ್ರಮವನ್ನು ದಿನಾಂಕ 11 ಮೇ 2026ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ಆಯೋಜಿಸಲಾಗಿದೆ.
ಉಡುಪಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದೊಂದಿಗೆ ನಡೆಯುವ ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಕುಂದಾಪುರದ ನೃತ್ಯ ವಸಂತ ನಾಟ್ಯಾಲಯ (ರಿ.) ಇದರ ಕಿರಿಯ ವಿದ್ಯಾರ್ಥಿಗಳಿಂದ ಸಂಸ್ಥೆಯ ನಿರ್ದೇಶಕರಾದ ವಿದುಷಿ ಶ್ರೀಮತಿ ಪ್ರವಿತ ಅಶೋಕ್ ಇವರ ನಿರ್ದೇಶನದಲ್ಲಿ ನೃತ್ಯಪ್ರದರ್ಶನ ನಡೆಯಲಿದೆ.

