ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಪಾಕ್ಷಿಕ ಸಮೂಹ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ 13ರ ಕಾರ್ಯಕ್ರಮವನ್ನು ದಿನಾಂಕ 13 ಜುಲೈ 2026ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ಆಯೋಜಿಸಲಾಗಿದೆ.
ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ.) ಕಲ್ಲಡ್ಕ ತಂಡದ ಕಲಾವಿದರಿಂದ ವಿದುಷಿ ಶ್ರೀಮತಿ ವಿದ್ಯಾಮನೋಜ್ ನಿರ್ದೇಶನದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯಪ್ರದರ್ಶನ ನಡೆಯಲಿದೆ.

