ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಸಮೂಹ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 09-03-2026ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀ ಮೂಕಾಂಬಿಕ ಕಲ್ಚರಲ್ ಅಕಾಡೆಮಿ (ರಿ.) ಇವರು ವಿದ್ವಾನ್ ದೀಪಕ್ ಕುಮಾರ್ ಇವರ ನಿರ್ದೇಶನದಲ್ಲಿ ನೃತ್ಯ ಪ್ರದರ್ಶನ ನೀಡಲಿದ್ದಾರೆ.


