ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಇವರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಂಡಾಜೆ ಇದರ ಸಹಯೋಗದಲ್ಲಿ ಆಯೋಜಿಸುವ ಶ್ರೀಮತಿ ಪದ್ಮಾ ಪಿ. ಬೇಡೇಕರ್ ವಿರಚಿತ ‘ದರ್ಪಣ’ ಕವನ ಸಂಕಲನದ ಲೋಕಾರ್ಪಣಾ ಸಮಾರಂಭವು ದಿನಾಂಕ 19 ಜೂನ್ 2025ನೇ ಗುರುವಾರ ಮಧ್ಯಾಹ್ನ ಗಂಟೆ 2-15ಕ್ಕೆ ಮುಂಡಾಜೆಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಇದರ ಅಧ್ಯಕ್ಷರಾದ ಶ್ರೀ ಡಿ. ಯದುಪತಿ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದ. ಕ. ಜಿಲ್ಲಾ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಕವನ ಸಂಕಲನ ಲೋಕಾರ್ಪಣೆಗೊಳಿಸಲಿದ್ದಾರೆ. ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಂಡಾಜೆ ಇಲ್ಲಿನ ಮುಖ್ಯೋಪಾಧ್ಯಾಯಿನಿಯಾದ ಮತಿ ಮಂಜುಳಾ ಶುಭಾಶಂಸನೆಗೈಯಲಿದ್ದು, ಶ್ರೀಮತಿ ಸ್ಮಿತಾ ಹೆಚ್. ಬೇಡೇಕರ್ ಕೃತಿ ಪರಿಚಯ ಮಾಡಿಕೊಡಲಿದ್ದಾರೆ. ಸಮಾರಂಭದಲ್ಲಿ ಶ್ರೀಮತಿ ಪದ್ಮಾ ಪಿ. ಬೇಡೇಕರ್ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ರವಿಕುಮಾರ್ ಉಪಸ್ಥಿತರಿರುವರು.

