ಮಂಗಳೂರು : ರಾಮಕೃಷ್ಣ ಮಿಷನ್ ಮಂಗಳಾದೇವಿ ಮಂಗಳೂರು ಸಂಸ್ಥೆಯ ಅಮೃತ ವರ್ಷ 75 ವರ್ಷಗಳ ಸಂಭ್ರಮಾಚರಣೆ ಅಂಗವಾಗಿ ದಾಸಸಾಹಿತ್ಯ ಸೇವಾ ಪ್ರತಿಷ್ಠಾನ ಮಂಗಳೂರು ಮತ್ತು ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಸಹಯೋಗದೊಂದಿಗೆ ಪ್ರಸ್ತುತ ಪಡಿಸುವ ‘ದಾಸ ಸುಧಾ ಲಹರಿ’ ಹರಿದಾಸರ ಕೃತಿ ಕೀರ್ತನೆಗಳ ಗಾಯನ ಕಾರ್ಯಕ್ರಮವನ್ನು ದಿನಾಂಕ 24 ಮೇ 2026ರಂದು ಸಂಜೆ 5-30 ಗಂಟೆಗೆ ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ದಾಸವಾಣಿ ಗಾಯಕಿ ವಿದುಷಿ ರೂಪಶ್ರೀ ಪ್ರಭಂಜನ್ ಬೆಂಗಳೂರು ಇವರು ಈ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಲಿದ್ದಾರೆ.

