ಮಂಗಳೂರು : ರಾಮಕೃಷ್ಣ ಮಿಷನ್ ಮಂಗಳೂರು ಮತ್ತು ದಾಸಸಾಹಿತ್ಯ ಸೇವಾ ಪ್ರತಿಷ್ಠಾನ ಮಂಗಳೂರು ಪ್ರಸ್ತುತ ಪಡಿಸುವ ಶ್ರೀಶಾ ಸೌಹಾರ್ದ ಕೋ ಅಪರೇಟಿವ್ ಸೊಸೈಟಿ ಪ್ರಾಯೋಜಿತ ‘ದಾಸಲಹರಿ’ ಹರಿದಾಸರ ಕೃತಿ ಕೀರ್ತನೆಗಳ ಗಾಯನ ಕಾರ್ಯಕ್ರಮವನ್ನು ದಿನಾಂಕ 26 ಏಪ್ರಿಲ್ 2026ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ರಾಜ್ಯ ಕಂಡ ಅಪರೂಪದ ಸಿರಿಕಂಠದ ಗಾಯಕ ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ಶ್ರೀ ರೆಹಮಾನ್ ಸಾಬ್ ನದಾಫ್ ಮುದ್ಗಲ್ ಇವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

