ಶಿವಮೊಗ್ಗ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ -2026, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಶಿವಮೊಗ್ಗ, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ.) ಶಿವಮೊಗ್ಗ ಇವರ ಸಹಯೋಗದಲ್ಲಿ ‘ಸಾಂಸ್ಕೃತಿಕ ದಸರಾ ಕವಿ ಕಾವ್ಯ ಸಂಭ್ರಮ’ವನ್ನು ದಿನಾಂಕ 19 ಅಕ್ಟೋಬರ್ 2026ರಂದು ಸಂಜೆ 05-00 ಗಂಟೆಗೆ ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಉಪನಿರ್ದೇಶಕರಾದ ಕೃಷ್ಣಮೂರ್ತಿ ಎಚ್.ಆರ್. ಇವರು ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾವ್ಯ ಸ್ಪಂದನೆ ಹಾಗೂ ಸಾಂಸ್ಕೃತಿಕ ಸಂಭ್ರಮ ನಡೆಯಲಿದೆ.

