ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್ ಹಾಗೂ ಮಯೂರಿ ಫೌಂಡೇಶನ್ ಜಂಟಿಯಾಗಿ ಆಯೋಜಿಸುವ ಐದನೇ ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿಯು ದಿನಾಂಕ 20 ಸೆಪ್ಟೆಂಬರ್ 2025 ರಂದು ಮಧ್ಯಾಹ್ನ ಘಂಟೆ 2.30ಕ್ಕೆ ಮಂಗಳೂರಿನ ಉರ್ವಾಸ್ಟೋರ್‌ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿಯ ತುಳುಭವನದಲ್ಲಿ ನಡೆಯಲಿದೆ.
ಹಿರಿಯ ಪತ್ರ ಕರ್ತ, ಸಾಹಿತಿ ಮಲಾರ್ ಜಯರಾಮ್ ರೈ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕವಿ ಗೋಷ್ಠಿಯನ್ನು ಬಹು ಭಾಷಾ ಕವಿ ವಿಲ್ಸನ್ ಕಟೀಲು ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ವ್ಯಾಪ್ತಿಯ 13 ಭಾಷೆಗಳ ಕವಿಗಳು ಕವಿತೆ ವಾಚಿಸಲಿದ್ದಾರೆ. ಮಯೂರಿ ಫೌಂಡೇಶನ್ ಅಧ್ಯಕ್ಷ ಜಯ ಕೆ. ಶೆಟ್ಟಿ ಮುಂಬಯಿ, ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ, ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷ ಚಂಚಲ ತೇಜೋಮಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಗೋಷ್ಠಿಯಲ್ಲಿ ಚೆನ್ನಪ್ಪ ಅಳಿಕೆ(ತುಳು), ಮಂಜುಳಾ ಶೆಟ್ಟಿ (ತುಳು), ಸತೀಶ್ ಪಡುಬಿದ್ರಿ (ಕೊರಗ ಭಾಷೆ), ಸದಾನಂದ ನಾರಾವಿ (ಕನ್ನಡ), ಕವಿತಾ ಅಡೂರು (ಶಿವಳ್ಳಿ – ತುಳು), ರತ್ನಾ ಕೆ. ಭಟ್ ತಲಂಜೇರಿ (ಹವ್ಯಕ ಕನ್ನಡ), ಕರುಣಾಕರ ಬಳ್ಕೂರು (ಕುಂದಗನ್ನಡ), ಶಮೀಮಾ ಕುತ್ತಾರ್ (ಬ್ಯಾರಿ), ಉದಯ ಭಾಸ್ಕರ್ (ಅರೆ ಭಾಷೆ), ಡಾ. ಮೀನಾಕ್ಷಿ ರಾಮಚಂದ್ರ (ಮಲೆಯಾಳಂ), ಬಾಲಕೃಷ್ಣ ಬೇರಿಕೆ (ಮರಾಠಿ), ರಾಧಿಕಾ ಪೈ(ಕೊಂಕಣಿ), ಚಂದ್ರಕಾಂತ್ ಗೋರೆ(ಚಿತ್ಪಾವನಿ), ಮೀರಾ ಭಟ್ ( ಕರಾಡ) ಭಾಷೆಗಳಲ್ಲಿ ಕವಿತೆಗಳನ್ನು ವಾಚಿಸಲಿದ್ದಾರೆ.