Subscribe to Updates

    Get the latest creative news from FooBar about art, design and business.

    What's Hot

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನಾಪೋಕ್ಲುವಿನ ಎಕ್ಸೆಲ್ ಶಾಲೆಯಲ್ಲಿ ದತ್ತಿನಿಧಿ ಉಪನ್ಯಾಸ
    Kannada

    ನಾಪೋಕ್ಲುವಿನ ಎಕ್ಸೆಲ್ ಶಾಲೆಯಲ್ಲಿ ದತ್ತಿನಿಧಿ ಉಪನ್ಯಾಸ

    January 27, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ನಾಪೋಕ್ಲು : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಸಂಯುಕ್ತಾಶ್ರಯದಲ್ಲಿ ಮಂಡೇಪಂಡ ಅಕ್ಕಮ್ಮ ಗಣವತಿ ಸ್ಮಾರಕದತ್ತಿ ಮತ್ತು ಎಸ್. ಎಸ್. ರಾಮಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮ ದಿನಾಂಕ 27 ಜನವರಿ 2025ರಂದು ನಡೆಯಿತು.

    ನಾಪೋಕ್ಲುವಿನ ಎಕ್ಸೆಲ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕಿ ಕೆ. ಡಿ. ಶೋಭಿತಾ ಮಾತನಾಡಿ “ಕನ್ನಡ ಸಾಹಿತ್ಯದ ಪ್ರಾಚೀನತೆ ಕ್ರಿಸ್ತಶಕ 8 ರಿಂದ 9ನೇಯ ಶತಮಾನಕ್ಕೆ ಮೊದಲಿನ ಸಾಹಿತ್ಯಿಕ ಸಾಕ್ಷಿಗಳು ಇಲ್ಲದಿರುವುದರಿಂದ ಕನ್ನಡ ನಾಹಿತ್ಯದ ಪ್ರಾರಂಭ ಅಸ್ಪಷ್ಟತೆಯಲ್ಲಿ ಮುಚ್ಚಿಹೋಗಿದೆ. ಏಕೆಂದರೆ ಕೆಲವೇ ಶಾಸನ ಪುರಾವೆಗಳು ಲಭ್ಯವಿದ್ದು, ಇತಿಹಾಸದ ಪ್ರಾರಂಭಿಕ ಹಂತಗಳಿಗೆ ಸೇರಿದ ಬಹುತೇಕ ಶಾಸನಗಳನ್ನು ಬ್ರಾಹ್ಮಲಿಪಿ ಹಾಗೂ ಪ್ರಾಕೃತ ಭಾಷೆಯಲ್ಲಿ ಬರೆಯಲಾಗಿದೆ. ಅವುಗಳಲ್ಲಿ ಬಹು ಪಾಲು ವೀರರಿಗೆ ಗೌರವ ಸಲ್ಲಿಸುವ ಕಿರು ಸ್ಮಾರಕ ದಾಖಲೆಗಳಾಗಿವೆ” ಎಂದರು.

    ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ವರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಮಾತನಾಡಿ “ತಮ್ಮ ಬದುಕಿನಲ್ಲಿ ಮಾಡಿದ ಸಾಧನೆ ಹಾಗೂ ಅವರ ಮಾರ್ಗದರ್ಶನದ ನೆನಪಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪನೆ ಮಾಡಿರುವ ದತ್ತಿ ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವಂತೆ ಕಾರ್ಯಕ್ರಮಗಳನ್ನು ಪರಿಷತ್ತು ಆಯೋಜಿಸುತ್ತಿದೆ. ಇಂತಹ ದತ್ತಿ ಕಾರ್ಯಕ್ರಮಗಳಿಂದ ಹಲವಾರು ವಿದ್ಯಾರ್ಥಿಗಳ ಪ್ರತಿಭೆ ಹೊರ ಹೊಮ್ಮಲು ಉತ್ತಮ ವೇದಿಕೆ ದೊರೆತಂತಾಗಿದೆ. ಆದುದರಿಂದ ದತ್ತಿ ಸ್ಥಾಪನೆ ಮಾಡಲು ಕಾರಣ ಬೇಕಾಗಿಲ್ಲ, ಕನ್ನಡದ ಬಗ್ಗೆ ಒಲವಿದ್ದರೆ ಸಾಕು” ಎಂದರು. ಇದೇ ಸಂದರ್ಭ ಶಾಲೆಯ ಪ್ರತಿಯೊಬ್ಬ ಶಿಕ್ಷಕರೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದುಕೊಂಡಿರುವುದಕ್ಕಾಗಿ ಅಭಿನಂದಿಸಿದರು.

    ಶಾಲೆಯ ಮುಖ್ಯ ಶಿಕ್ಷಕ ಜೋಕಿರ ತಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಲೆಯ ವಕ್ತಾರ ವಿದ್ಯಾ ಸುರೇಶ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪಿ. ವಿ. ಪ್ರಭಾಕರ, ನಾಪೋಕ್ಲು ಹೋಬಳಿ ಗೌರವ ಕಾರ್ಯದರ್ಶಿ ಉಮಾ ಪ್ರಭು, ನಿವೃತ್ತ ಶಿಕ್ಷಕಿ ಅಮೆ ಭವಾನಿ, ಶಾಲಾ ಶಿಕ್ಷಕ ವೃಂದ ಸೇರಿದಂತೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿನಿ ಎಂ.ಶರಣ್ಯ ಸ್ವರಚಿತ ಕವನ ವಾಚಿಸಿದರು. ಶಿಕ್ಷಕಿ ಬಿ. ಸಿ. ರಶ್ಮಿ ಸ್ವಾಗತಿಸಿ, ಬಿ. ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಬಾಳೆಯಡ ದಿವ್ಯ ಮಂದಪ್ಪ ವಂದಿಸಿದರು.

    kannada Literature
    Share. Facebook Twitter Pinterest LinkedIn Tumblr WhatsApp Email
    Previous Articleಲೋಕಾರ್ಪಣೆಗೊಂಡ ‘ಕಪ್ಪು ಗಿಡಿ’ ಕೃತಿಯ ಆಂಗ್ಲ ಅವತರಣಿಕೆ
    Next Article ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ಪ್ರಮುಖ ವಕ್ತಾರ – ಎಂ. ಎನ್. ವ್ಯಾಸರಾವ್
    roovari

    Add Comment Cancel Reply


    Related Posts

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘#36 ಸತಿ ಸಾವಿತ್ರಿ ನಿವಾಸ’ ಕನ್ನಡ ನಾಟಕ ಪ್ರದರ್ಶನ | ಜೂನ್ 01

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.