ಕಾಂತಾವರ : ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ. ನಾ. ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024ರ ಸಾಲಿನ ಮೂರು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರೀ ಬಾಲಕೃಷ್ಣ ಆಚಾರ್ ಮತ್ತು ಅವರ ಪತ್ನಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ವಾಣಿ ಬಿ. ಆಚಾರ್ ಇವರು ಕನ್ನಡ ಸಂಘದಲ್ಲಿ ಸ್ಥಾಪಿಸಿದ ದತ್ತಿನಿಧಿಯ ‘ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ’ಯನ್ನು ಕಾಂತಾವರದ ನಿವೃತ್ತ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ವಿಠಲ ಬೇಲಾಡಿಯವರಿಗೆ, ಕನ್ನಡ ಸಂಘದಲ್ಲಿ ಮೊಗಸಾಲೆ ಕುಟುಂಬದವರು ಸ್ಥಾಪಿಸಿದ ದತ್ತಿನಿಧಿಯ ‘ಕಾಂತಾವರ ಸಾಹಿತ್ಯ ಪ್ರಶಸ್ತಿ’ಯನ್ನು ಸುಳ್ಯ ತಾಲೂಕಿನ ಅಜ್ಜಾವರದ ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿಗಳಾದ ಡಾ. ಪ್ರಭಾಕರ ಶಿಶಿಲ ಇವರಿಗೆ ಮತ್ತು ಕನ್ನಡ ಸಂಘದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅಧ್ಯಾಪಿಕೆ ಶ್ರೀಮತಿ ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ಇವರು ಸ್ಥಾಪಿಸಿದ ದತ್ತಿನಿಧಿಯ ‘ಕಾಂತಾವರ ಅನುವಾದ ಸಾಹಿತ್ಯ ಪ್ರಶಸ್ತಿ’ಯನ್ನು ಕುಂದಾಪುರದ ನಿವೃತ್ತ ಪ್ರಾಧ್ಯಾಪಕಿ ಹಾಗೂ ಸಾಹಿತಿ ಡಾ. ಪಾರ್ವತಿ ಜಿ. ಐತಾಳ್ ಇವರಿಗೆ ನೀಡುವುದೆಂದು ನಿರ್ಣಯಿಸಲಾಗಿದೆ. ಪ್ರಶಸ್ತಿಯು ತಲಾ 10,000 ರೂಪಾಯಿಗಳ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 01 ನವಂಬರ್ 2024 ರಂದು ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯುವ ‘ಕಾಂತಾವರ ಉತ್ಸವ’ದಲ್ಲಿ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.

ಡಾ. ಪಾರ್ವತಿ ಜಿ. ಐತಾಳ್

ಡಾ. ಪ್ರಭಾಕರ ಶಿಶಿಲ


ವಿಠಲ ಬೇಲಾಡಿ