ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ‘ಡೆನ್ನ ಡೆನ್ನಾನ – ಪದ ಪನ್ಕನ’ ವಿದ್ಯಾರ್ಥಿಗಳಿಗಾಗಿ ತುಳು ಹಾಡುಗಳ ಕಲಿಕಾ ಕಾರ್ಯಾಗಾರ ಮತ್ತು ಹಾಡುಗಳ ಪ್ರಸ್ತುತಿ ಕಾರ್ಯಕ್ರಮವನ್ನು ದಿನಾಂಕ 22 ಆಗಸ್ಟ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಸೋಮೇಶ್ವರದ ಆನಂದಾಶ್ರಮ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಲಾವಿದೆ ಕುಮಾರಿ ರೂಪಶ್ರೀ ವರ್ಕಾಡಿ ಇವರು ಉದ್ಘಾಟನೆ ಮಾಡಲಿದ್ದಾರೆ. ಗಾಯಕರು ಮತ್ತು ಸಂಗೀತ ನಿರ್ದೇಶಕರಾದ ತೋನ್ಸೆ ಪುಷ್ಕಳ ಕುಮಾರ್ ಮತ್ತು ಗಾಯಕಿ ಮತ್ತು ಸಂಗೀತ ಶಿಕ್ಷಕಿ ವಾಣಿ ಸಪ್ರೆ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿರ್ಮಿಸಿದ ದಿನೇಶ್ ಅತ್ತಾವರ ಇವರ ನಿರ್ದೇಶನದಲ್ಲಿ ‘ಜಾಗ್ ರ್ತೆ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ.