ಸಾಣೇಹಳ್ಳಿ : ಕರ್ನಾಟಕ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ 2026-27ನೆಯ ಸಾಲಿನ ರಂಗಶಿಕ್ಷಣಕ್ಕೆ (ಡಿಪ್ಲೋಮಾ ಇನ್ ಡ್ರಾಮಾ ಆರ್ಟ್ಸ್)ಗೆ ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಕೊಡಲಾಗಿದೆ. ರಂಗಭೂಮಿಯಲ್ಲಿ ಆಸಕ್ತಿಯಿದ್ದು ಸ್ವಲ್ಪಮಟ್ಟಿನ ಅನುಭವ ಇರಬೇಕಾದದ್ದು ಅಗತ್ಯ. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಊಟ, ವಸತಿ ಸೌಲಭ್ಯವಿದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಭಂಡಾರ ಹಾಗೂ ದೃಶ್ಯ, ಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಯ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ನೇರ ನೇಮಕಾತಿ 05 ಜುಲೈ 2026ರಂದು ಬೆಳಗ್ಗೆ 11-00 ಗಂಟೆಗೆ ಸಂದರ್ಶನ ನಡೆಯಲಿದ್ದು ಆಸಕ್ತರು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 9448398144/9880872740 ಸಂಖ್ಯೆಯನ್ನು ಸಂಪರ್ಕಿಸಿರಿ.

