ಮಂಗಳೂರು : ಆಶ್ರಯ ಅಂಗನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಿನ್ನ ಸಾಮರ್ಥ್ಯದ ಮಕ್ಕಳಿಗೆ ‘ವೈವಿಧ್ಯಮ್ 2026’ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಭಿನ್ನ ಸಾಮರ್ಥ್ಯದ ಮಕ್ಕಳಲ್ಲಿ ಅತ್ಯವಿಶ್ವಾಸ ಮೂಡಿಸಲು, ಅವರ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ನೀಡಲು ಹಾಗೂ ಅವರ ಪ್ರತಿಭೆಯನ್ನು ಸಂಭ್ರಮಿಸಲು ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿನಾಂಕ 10 ಜುಲೈ 2026ರಂದು ಈ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಯ ಮೂಲಕ ಪ್ರತಿಭಾವಂತ ವಿಶೇಷ ಚೇತನರು ಒಂದೇ ಸೂರಿನಡಿ ಸೇರಿ ಸಂಭ್ರಮಿಸಲು ಅವಕಾಶ ಕಲ್ಪಸಿದಂತಾಗುತ್ತದೆ. ಈ ಹಿನ್ನಲೆಯಲ್ಲಿ ಈ ಅರ್ಥಪೂರ್ಣ ಸ್ಪರ್ಧೆ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ 95356 25301 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಟ್ರಸ್ಟಿನ ವ್ಯವಸ್ಥಾಪಕ ಟ್ರಸ್ಟಿ ಆಶಾ ಕುಮಾರಸ್ವಾಮಿ ತಿಳಿಸಿದ್ದಾರೆ.
