Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    ವಿಶೇಷ ಲೇಖನ | ಮುಂಬೈ ಕನ್ನಡಿಗ, ಪತ್ರಕರ್ತನ ಸಾಧನೆ

    May 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಮಟ್ಟದ ಕವಿಗೋಷ್ಠಿ
    Felicitation

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಮಟ್ಟದ ಕವಿಗೋಷ್ಠಿ

    April 17, 2026No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಧಾರವಾಡದ ವತಿಯಿಂದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಧಾರವಾಡ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾಮಟ್ಟದ ಕವಿಗೋಷ್ಠಿಯು ದಿನಾಂಕ 05 ಏಪ್ರಿಲ್ 2026ರಂದು ನಡೆಯಿತು.

    ಈ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.), ಬೆಂಗಳೂರು ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ “ಕವಿಗಳಿಗೆ ಕಾವ್ಯ ಪರಂಪರೆಯ ಜೊತೆಗೆ ಹಿರಿಯ ತಲೆಮಾರಿನ ಕವಿಗಳ ಸಾಹಿತ್ಯದ ತಿರುಳು ಗೊತ್ತಿರಬೇಕು. ಕನ್ನಡ ಸಾಹಿತ್ಯೇತಿಹಾಸದಲ್ಲಿ ಜನಪದ ಸಾಹಿತ್ಯ ಹಾಗೂ ವಚನ ಸಾಹಿತ್ಯ ಅನುಭಾವದ ಮೌಲ್ಯಗಳನ್ನು ಕಟ್ಟಿಕೊಡುವುದರ ಜೊತೆಗೆ ತಳಸಮುದಾಯದ ಬದುಕಿಗೆ ಬಲ ತುಂಬಿವೆ. ಆದ್ದರಿಂದ ಕಾವ್ಯ ಸಮಾಜದ ಕಟ್ಟಕಡೆಯ ಬದುಕಿನ ತಲ್ಲಣಗಳಿಗೆ ಸ್ಪಂದಿಸಬೇಕು. ಕರೋನಾ ಕಾಲ ಘಟ್ಟದಲ್ಲಿ ಆರಂಭವಾದ ವೇದಿಕೆ ಬಸವಣ್ಣ ಹಾಗೂ ಕುವೆಂಪುರವರ ವಿಚಾರಧಾರೆಗಳ ಅಡಿಯಲ್ಲಿ ಸಮಸಮಾಜದ ಕನಸಿನೊಂದಿಗೆ ಎಲೆಮರೆ ಕಾಯಿಯಂತಹ ಸಾಧಕರನ್ನು ಗುರುತಿಸುವ ಹಾಗೂ ಯುವಕ, ಯುವತಿಯರಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯ ಉಪಾಧ್ಯಕ್ಷ ಶಾಲಿನಿ ರುದ್ರಮುನಿ ಹಾಗೂ ಜಿಲ್ಲಾಧ್ಯಕ್ಷರಾದ ಎ.ಎ. ದರ್ಗಾರವರ ನಾಯಕತ್ವ ಹಾಗೂ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ಸಹಕಾರದಲ್ಲಿ ಕಳೆದ ನಾಲ್ಕೈದು ವರ್ಷಗಳಲ್ಲಿ ಧಾರವಾಡದಲ್ಲಿ ನಮ್ಮ ವೇದಿಕೆ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕನ್ನಡದ ಕೆಲಸ ಮಾಡುತ್ತಿದೆ” ಎಂದರು.

    ರಾಜ್ಯ ಗೌರವಾಧ್ಯಕ್ಷ ಹಾಗೂ ಹಿರಿಯ ಶರಣ ಸಾಹಿತಿ ರಂಜಾನ್ ದರ್ಗಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ “ರಾಜಕಾರಣಿಗಳು ಹಾಗೂ ಕಾರ್ಪೋರೇಟರ್‌ಗಳು ತಮ್ಮ ತಮ್ಮ ವೈಯಕ್ತಿಕ ವರ್ಚಸ್ಸಿಗೋಸ್ಕರ ಧರ್ಮಂಧತೆಯಲ್ಲಿ ತೇಲಾಡುತ್ತಾ ಯುದ್ಧಗಳನ್ನು ಘೋಷಿಸಿ ಐಷಾರಾಮಿ ಬದುಕು ಸಾಗಿಸುತ್ತಾ ಜನಸಾಮಾನ್ಯರನ್ನು, ಸಮಾಜದ ಕಟ್ಟಕಡೆಯ ಸಮುದಾಯದಿಂದ ಬಂದ ಸೈನಿಕರನ್ನು ಬಲಿಕೊಡುತ್ತಾ ಧಮನಿತರ ಮೇಲೆ ಕ್ರೌರ್ಯ ಮೆರೆಯುತ್ತಿರುವುದು ದುರಂತ ಸಂಗತಿ. ಎಲ್ಲೋ ಮಾಡಿದ ಯುದ್ಧಗಳು ಮತ್ಯಾವುದೋ ದೇಶದ ಆರ್ಥಿಕತೆ, ಸಾಮಾಜಿಕ, ಸಾಂಸ್ಕೃತಿಕತೆಯ ಮೇಲೆ ಪ್ರಭಾವ ಬೀರುತ್ತಿದೆ. ಜಗತ್ತಿನ ಎಲ್ಲಾ ಮಹಾಕಾವ್ಯಗಳು ಸಹ ಯುದ್ಧದ ಭೀಕರತೆಯ ಜೊತೆಗೆ ಅಂತಿಮವಾಗಿ ಶಾಂತಿಯನ್ನು ಸಾರಿವೆ. ಭರತ ಬಾಹುಬಲಿಯಿಂದ, ರಾಮಾಯಣ, ಮಹಾಭಾರತ ಸೇರಿದಂತೆ ಎಲ್ಲಾ ಮಹಾಕಾವ್ಯಗಳ ಅಚಿತಿಮ ಸಂದೇಶ ಮಾನವ ಕುಲದ ಸಮೃದ್ಧಿ, ಶಾಂತತೆ, ನೆಮ್ಮದಿಯಾಗಿವೆ. ಬರಹಗಾರರು ವರ್ತಮಾನದ ತಲ್ಲಣಗಳ ಮೇಲೆ ಬೆಳಕು ಚೆಲ್ಲಬೇಕು. ನಮಗೆಲ್ಲಾ ಹನ್ನೆರಡನೇ ಶತಮಾನದ ಬಸವಾದಿ ಶಿವಶರಣರ ನಡೆ ನುಡಿಗಳೊಂದಾದ ಬದುಕಿನ ತತ್ತ್ವ ಸಿದ್ಧಾಂತಗಳು ಆದರ್ಶವಾಗಬೇಕು. ಜಾತ್ಯಾತೀತವಾಗಿ, ಧರ್ಮಾತೀತವಾಗಿ, ಲಿಂಗಾತೀತವಾಗಿ ವಿಶ್ವಮಾನವ ಮೌಲ್ಯಗಳನ್ನು ಸಾರುತ್ತಾ ಕಾಯಕ ಸಿದ್ಧಾಂತದಡಿಯಲ್ಲಿ ಸಮಸಮಾಜವನ್ನು ಕಟ್ಟಿದ ಬಸವಾದಿ ಶರಣರ ಬದುಕು ನಿತ್ಯ ಆದರ್ಶವಾಗಬೇಕು. ದಯೆಬೇಕು ಸಕಲ ಪ್ರಾಣಿಗಳೆರಲಿ ಎಂಬಂತೆ ಸಕಲ ಜೀವಜಂತುಗಳ ಬಗೆಗೆ ದಯೆತೋರಬೇಕು. ಇಂದಿನ ಕವಿಗೋಷ್ಠಿಯಲ್ಲಿ ಯುವಕರು ಹಾಗೂ ಮಹಿಳೆಯರು ಪಾಲ್ಗೊಂಡಿದ್ದು ಅತ್ಯಂತ ಆಶಾದಾಯಕ ಬೆಳವಣಿಗೆಯಾಗಿದೆ. ಯುದ್ಧ ಹಾಗೂ ಯುಗಾದಿ ವಿಷಯಗಳಡಿಯಲ್ಲಿ ಬರೆದ ಬಹುತೇಕ ಕವಿತೆಗಳು ಸಮಸಮಾಜದ ಕನಸಿಗೆ ಒತ್ತಾಸೆಯಾಗಿ ನಿಂತವು. ಅಸ್ಲಾಂ ದರ್ಗಾ ಅವರ ನಾಯಕತ್ವದಲ್ಲಿ ಧಾರವಾಡ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಉತ್ತಮೋತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಇವತ್ತಿನ ಕವಿಗೋಷ್ಠಿ ಅತ್ಯಂತ ಯಶಸ್ವೀಯಾಗಿದೆ” ಎಂದು ಆಶಿಸಿದರು.

    ರಾಜ್ಯ ಉಪಾಧ್ಯಕ್ಷೆ ಶಾಲಿನಿ ಆರ್. ರುದ್ರಮುನಿ ತಾಲೂಕು ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಮಾತನಾಡಿ “ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳ ಮೌಲ್ಯಗಳನ್ನು ಪಸರಿಸುವಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ. ಜಿಲ್ಲಾಧ್ಯಕ್ಷರಾದ ಎ.ಎ. ದರ್ಗಾರವರ ಮಾರ್ಗದರ್ಶನದಲ್ಲಿ ಹಿರಿಯ ಸಾಹಿತಿ ಸಂಧ್ಯಾ ಧೀಕ್ಷಿತರವರ ನೇತೃತ್ವದಲ್ಲಿ ಹುಬ್ಬಳ್ಳಿ ಘಟಕ ಹಾಗೂ ಶಿವು ಖನ್ನೂರರವರ ನೇತೃತ್ವದಲ್ಲಿ ಧಾರವಾಡ ತಾಲ್ಲೂಕು ಕಾರ್ಯನಿರ್ವಹಿಸುತ್ತಿವೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇನ್ನೂ ಗಟ್ಟಿಯಾಗಿ ವೇದಿಕೆಯನ್ನು ಕಟ್ಟಬೇಕಾದ ಜವಬ್ದಾರಿ ನಮ್ಮ ಮೇಲಿದೆ” ಎಂದರು.

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷ ಎ.ಎ. ದರ್ಗಾ ಪ್ರಸ್ತಾವಿಕವಾಗಿ ಮಾತನಾಡಿ “ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಒಂದು ಕಾಲಘಟ್ಟದಲ್ಲಿ ಉಚ್ಛಾಯ ಸ್ಥಿತಿಯಲ್ಲಿದ್ದ ಧಾರವಾಡ ಇಂದು ನಿರಾಸಕ್ತಿಯೆಡೆಗೆ ಸಾಗುತ್ತಿರುವುದು ದುರಂತ. ಸಾಹಿತ್ಯ ಸಮ್ಮೇಳನ ಹಾಗೂ ಸಾಹಿತ್ಯ ಕಾರ್ಯಕ್ರಮಗಳಲ್ಲಿ ಯುವಜನತೆ ತೊಡಗಿಸಿಕೊಳ್ಳುತ್ತಿರುವುದು ತುಂಬಾ ಕ್ಷೀಣಿಸುತ್ತಿದೆ. ಇದು ಭವಿಷ್ಯಕ್ಕೆ ತುಂಬಾ ನಿರಾಸೆಯನ್ನುಂಟು ಮಾಡುತ್ತದೆ. ಸಾಹಿತ್ಯ ಸಂಘಟನೆಗಳು ಹಾಗೂ ಸಾಹಿತಿಗಳು ಇಂದಿನ ಯುವಜನತೆಗೆ ಸ್ಫೂರ್ತಿತುಂಬ ಬೇಕಿದೆ. ಸಾಹಿತ್ಯದ ಜಾಗೃತಿ ಮೂಡಿಸಬೇಕಿದೆ. ಸಾಂಸ್ಕೃತಿಕ ಆಸಕ್ತಿಯನ್ನು ಬೆಳೆಸಬೇಕಿದೆ. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಮೂಲ ಉದ್ಧೇಶವೇ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದಾಗಿದೆ” ಎಂದರು.

    ವೇದಿಕೆಯಲ್ಲಿ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್, ರಾಜ್ಯ ಗೌರವಾಧ್ಯಕ್ಷ ರಂಜಾನ್ ದರ್ಗಾ, ರಾಜ್ಯ ಉಪಾಧ್ಯಕ್ಷೆ ಶಾಲಿನಿ ಆರ್. ರುದ್ರಮುನಿ, ಜಿಲ್ಲಾಧ್ಯಕ್ಷ ಎ.ಎ. ದರ್ಗಾ, ನಿವೃತ್ತ ಪ್ರಾಚಾರ್ಯರಾದ ಪ್ರೊ. ಎಸ್.ಆರ್. ಆಶಿ, ಹಿರಿಯ ಸಾಹಿತಿ ಎಂ.ಡಿ. ಒಕ್ಕುಂದ, ಧಾರವಾಡ ತಾಲೂಕು ಅಧ್ಯಕ್ಷ ಶಿವು ಎಂ. ಖನ್ನೂರ, ಹುಬ್ಬಳ್ಳಿ ತಾಲೂಕು ಅಧ್ಯಕ್ಷೆ ಸಂಧ್ಯಾ ಧೀಕ್ಷಿತ ಮುಂತಾದವರು ಮಾತನಾಡಿದರು.

    ನಂತರ ನಡೆದ ಜಿಲ್ಲಾಮಟ್ಟದ ಕವಿಗೋಷ್ಠಿಯಲ್ಲಿ ಸುಹಾಸಿನಿ ಕುಕ್ಕಡೊಳ್ಳಿ, ಸುಲೋಚನಾ ಮಾಲಿ ಪಾಟೀಲ, ಮಂಜುನಾಥ ಮದ್ನೂರು, ಎಸ್.ಎಂ. ಮುಲ್ಲಾ, ಶ್ರೀನಿವಾಸ ಪಾಟೀಲ, ಪರ್ವೀನ್ ದರ್ಗಾ, ಡಾ. ರೇಣುಕಾತಾಯಿ ಎಂ. ಸಂತಬಾ, ಜ್ಯೋತಿ ಎಂ. ಚಿನಗುಂಡಿ, ದೀಪಾ ಜವಳಿ, ಭಾರತಿ ಬಡಿಗೇರ, ಗಣೇಶ ಏಸುಗಡೆ, ಸಂತೋಷ ಕರೆಮಳ್ಳನವರ, ಶಾಂತ ಕೆ. ಹೊಂಬಳ, ಪ್ರಿಯಾಂಕ ಮಾವಿನಕರ, ಮಲ್ಲಮ್ಮ ಯಾತಗಲ್ಲ, ಪದ್ಮಾ ಕಲೆಗಾರ, ಗಿರಿಜಾ ಸಂಗೊಳ್ಳಿ, ಪಾರ್ವತಿ ಹಮ್ಮಿಗೆ, ಮೇಘಾ ಹುಕ್ಕೇರಿ, ಸಂಗನಗೌಡ ಯಾಳಗಿ, ರಾಹುಲ ಉಪ್ಪಾರ, ಪಾರಕ್ಕ ದಾನನ್ನವರ್, ರಾಜೇಶ್ವರಿ ಕೋಲಕಾರ, ದೀಪಶ್ರೀ ನಾಯಕ, ಅಶೋಕ ಮುತ್ತಗಿ, ಪದ್ಮಜಾ ಉಮರ್ಜಿ, ಮಂಗಳಾ ನಾಡಿಗೇರ, ಸುಮಾ ಜೋಷಿ ಸೇರಿದಂತೆ ಹಲವರು ಭಾಗವಹಿಸಿದ್ದರು.

    baikady felicitation Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಭ್ರಾಮರೀ ನಾಟ್ಯಾಲಯದ ‘ನೃತ್ಯ ಮಂಥನ–10’ | ಏಪ್ರಿಲ್ 19
    Next Article ಲೇಖನ, ಪ್ರಬಂಧಗಳಿಗೆ ಆಹ್ವಾನ | ಕೊನೆಯ ದಿನಾಂಕ ಮೇ 15
    roovari

    Add Comment Cancel Reply


    Related Posts

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    ವಿಶೇಷ ಲೇಖನ | ಮುಂಬೈ ಕನ್ನಡಿಗ, ಪತ್ರಕರ್ತನ ಸಾಧನೆ

    May 15, 2026

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.