ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ಮಂಗಳೂರು ವಿಭಾಗ ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮವು 28 ಜುಲೈ2024ರಂದು ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ. ಕ. ಜಿಲ್ಲಾ ಘಟಕದ ಚೇರ್ಮನ್ ಆದ ಸಿ. ಎ. ಶಾಂತಾರಾಮ ಶೆಟ್ಟಿ ಮಾತನಾಡಿ “ಸಾಹಿತ್ಯ ಮತ್ತು ಕನ್ನಡ ಭಾಷೆಯಿಂದ ಇಂದು ನಮ್ಮ ಮಕ್ಕಳು ವಿಮುಖರಾಗುತ್ತಿದ್ದಾರೆ. ಇದು ಆತಂಕಕಾರಿ ಬೆಳವಣಿಗೆ. ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಹಾಗೂ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮೂಡಿಸಿದರೆ ಮಾತ್ರ ನಮ್ಮ ನಾಡು, ನುಡಿ ಹಾಗೂ ಸಂಸ್ಕೃತಿ ಉಳಿಯಲು ಸಾಧ್ಯ.” ಎಂದು ಅಭಿಪ್ರಾಯಪಟ್ಟರು.
ಅ. ಭಾ. ಸಾ. ಪ. ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ, ಡಾ. ಮಾಧವ ಎಂ. ಕೆ., ಸುರೇಶ ಪರ್ಕಳ ಇವರು ಸಾಹಿತ್ಯ ಹಾಗೂ ಸಂಘಟನೆಯ ಕುರಿತು ಉಪನ್ಯಾಸ ನೀಡಿದರು.
ಅ. ಭಾ. ಸಾ. ಪ. ರಾಜ್ಯ ಕಾರ್ಯದರ್ಶಿ ಶೈಲೇಶ್ ಕುಲಾಲ್, ವಿಭಾಗ ಸಂಯೋಜಕ ಸುಂದರ ಶೆಟ್ಟಿ, ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಕೊಡಗು ಜಿಲ್ಲಾ ಸಮಿತಿ ಜತೆ ಕಾರ್ಯದರ್ಶಿ ಸಿ. ಎ. ತಮ್ಮಯ್ಯ ಉಪಸ್ಥಿತರಿದ್ದರು. ಅ. ಭಾ. ಸಾ. ಪ. ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ. ಬಿ. ಹರೀಶ್ ರೈ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್ ಕಾರ್ಯಕ್ರಮ ನಿರೂಪಿಸಿದರು.