ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 109ನೆಯ ಸಂಸ್ಥಾಪನಾ ದಿನಾಚರಣೆಯನ್ನು ದಿನಾಂಕ 05-05-2023ನೆಯ ಶುಕ್ರವಾರದಂದು ಎಲ್ಲೆಲ್ಲೂ ಸಂಭ್ರಮದಿಂದ ಅಚರಿಸಲಾಗುತ್ತಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು, ಮಂಗಳೂರು ಇಲ್ಲಿ ಪೂರ್ವಾಹ್ನ ಗಂಟೆ 10-30ಕ್ಕೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಇವರ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಇಂದಾಜೆ ಶ್ರೀ ಶ್ರೀನಿವಾಸ ನಾಯಕ್ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಇತಿಹಾಸ ಸಂಶೋಧಕರಾದ ಡಾ. ಪುಂಡಿಕಾಯಿ ಗಣಪಯ್ಯ ಭಟ್ ‘ಕನ್ನಡದ ಅಸ್ಮಿತೆ – ಕನ್ನಡ ಸಾಹಿತ್ಯ ಪರಿಷತ್ತು’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡುತ್ತಾರೆ. ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮೀ ಬಿ. ಶೆಟ್ಟಿ ಮುಖ್ಯ ಅತಿಥಿಯಾಗಿದ್ದು, ಕ.ಸಾ.ಪ. ಬೆಂಗಳೂರು ಇದರ ಕಾರ್ಯಕಾರಿ ಸಮಿತಿಯ ಸದಸ್ಯ ಡಾ. ಮಾಧವ ಎಂ.ಕೆ. ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಕ.ಸಾ.ಪ. ಮಂಗಳೂರು ತಾಲೂಕು ಘಟಕದ ಅಧ್ಯಕ್ಷರು ಶ್ರೀ ಮಂಜುನಾಥ ಎಸ್. ರೇವಣಕರ್ ಸರ್ವರನ್ನೂ ಸ್ವಾಗತಿಸಲಿದ್ದಾರೆ.
ದ.ಕ. ಜಿಲ್ಲಾ ಕ.ಸಾ.ಪ. ಉಳ್ಳಾಲ ತಾಲೂಕು ಘಟಕ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನಾಚರಣೆಯನ್ನು ಮಧ್ಯಾಹ್ನ 3.30ಕ್ಕೆ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮುಂಭಾಗದಲ್ಲಿರುವ ಕಂಫರ್ಟ್ ಇನ್ ಇದರ ಕಿರುಸಭಾಂಗಣದಲ್ಲಿ ನಡೆಸುತ್ತಾರೆ. ಕಾರ್ಯಕ್ರಮದಲ್ಲಿ ವಿದ್ವಾಂಸರೂ, ಕಣ್ಣೂರು ವಿಶ್ವವಿದ್ಯಾನಿಲಯದ ಕಾಸರಗೋಡಿನ ಭಾರತೀಯ ಭಾಷಾ ಅಧ್ಯಯನಾಂಗದ ವಿಶ್ರಾಂತ ನಿರ್ದೇಶಕರೂ ಆದ ಡಾ. ಪಿ. ಶ್ರೀಕೃಷ್ಣ ಭಟ್ ಇವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಹಿರಿಯರಾದ ಶ್ರೀ ತೋನ್ಸೆ ಪುಷ್ಕಳ ಕುಮಾರ್ ಮತ್ತು ಶ್ರೀ ಗುಣಾಜೆ ರಾಮಚಂದ್ರ ಭಟ್ ಇವರಿಗೆ ಸನ್ಮಾನ ಕಾರ್ಯಕ್ರಮವಿದೆ. ದ.ಕ. ಜಿಲ್ಲಾ ಕ.ಸಾ.ಪ. ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷರಾದ ಡಾ. ಧನಂಜಯ ಕುಂಬ್ಳೆ ಮತ್ತು ಪದಾಧಿಕಾರಿಗಳು ಸರ್ವರಿಗೂ ಪ್ರೀತಿಯ ಸ್ವಾಗತ ಕೋರಿದ್ದಾರೆ.
ದ.ಕ. ಜಿಲ್ಲಾ ಕ.ಸಾ.ಪ. ಮುಲ್ಕಿ ತಾಲೂಕು ಘಟಕ ಅಪರಾಹ್ನ 4 ಗಂಟೆಗೆ ಪುನರೂರು ಟೂರಿಸ್ಟ್ ಹೋಂ ಸಭಾಂಗಣ ಮುಲ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನಾಚರಣೆ ಆಚರಿಸಲಿದೆ. ಡಾ. ಹರಿಕೃಷ್ಣ ಪುನರೂರು ಮಾಜಿ ಅಧ್ಯಕ್ಷರು, ಕ.ಸಾ.ಪ. ಬೆಂಗಳೂರು ಮತ್ತು ಮಂಗಳೂರು ತಾಲೂಕು ಕ.ಸಾ.ಪ.ದ ಮಾಜಿ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಅಂಚನ್ ಇವರುಗಳ ಗೌರವ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಮಿಥುನ ಕೊಡೆತ್ತೂರು ಅಧ್ಯಕ್ಷರು, ಜೊಸ್ಸಿ ಪಿಂಟೋ ಕಿನ್ನಿಗೋಳಿ ಕಾರ್ಯದರ್ಶಿ, ವೀಣಾ ಶಶಿಧರ್ ಪುನರೂರು ಕಾರ್ಯದರ್ಶಿ ಮತ್ತು ಕ.ಸಾ.ಪ. ಮೂಲ್ಕಿ ತಾಲೂಕು ಘಟಕದ ಸರ್ವ ಪದಾಧಿಕಾರಿಗಳು ಎಲ್ಲರಿಗೂ ಆತ್ಮೀಯ ಸ್ವಾಗತ ಕೋರಿದ್ದಾರೆ.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಅಪರಾಹ್ನ 3 ಗಂಟೆಗೆ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದ ರತ್ನಾಕರವರ್ಣಿ ಸಭಾಭವನದಲ್ಲಿ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ. ಕ.ಸಾ.ಪ. ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ವೇಣುಗೋಪಾಲ ಶೆಟ್ಟಿ ಕೆ. ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಚಿಂತಕರು-ಲೇಖಕರಾದ ಶ್ರೀ ಅರವಿಂದ ಚೊಕ್ಕಡಿಯವರ ಉಪನ್ಯಾಸವಿದೆ. ಮೂಡುಬಿದಿರೆ ಕ.ಸಾ.ಪ. ತಾಲೂಕು ಘಟಕದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಕಾರ್ಯಕ್ರಮಕ್ಕೆ ಸರ್ವರನ್ನೂ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಕ.ಸಾ.ಪ. ಸಂಸ್ಥಾಪನಾ ದಿನಾಚರಣೆಯನ್ನು 05.05.2023ರಂದು ಪೂರ್ವಾಹ್ನ 10.30ಕ್ಕೆ ಪ್ರಗತಿ ಸ್ಟಡಿ ಸೆಂಟರ್ ಧರ್ಮಸ್ಥಳ ಕಟ್ಟಡ ಮುಖ್ಯ ರಸ್ತೆ ಪುತ್ತೂರಿನಲ್ಲಿ ಆಚರಿಸುತ್ತಿದೆ. ಪದಾಧಿಕಾರಿಗಳು ಸರ್ವ ಕನ್ನಡಿಗರಿಗೆ ಆತ್ಮೀಯ ಸ್ವಾಗತ ಬಯಸಿದ್ದಾರೆ.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದ ಸಂಕಲ್ಪ ಕನ್ನಡ ಸಂಘ ಕನ್ನಡ ವಿಭಾಗದ ಆಶ್ರಯದಲ್ಲಿ ಅಪರಾಹ್ನ 2 ಗಂಟೆಗೆ ‘ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಹಾಗೂ ಕೃತಿ ಬಿಡುಗಡೆ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕ.ಸಾ.ಪ. ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪೇರಾಲು ಇವರ ಘನ ಅಧ್ಯಕ್ಷತೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದ ಪ್ರಾಂಶುಪಾಲ ಶ್ರೀ ಸತೀಶ್ ಕೆ. ಆರ್. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಖ್ಯಾತ ಸಾಹಿತಿ ಡಾ.ಬಿ. ಪ್ರಭಾಕರ ಶಿಶಿಲ ಇವರು ‘ಕನ್ನಡದ ಅಸ್ಮಿತೆ – ಕನ್ನಡ ಸಾಹಿತ್ಯ ಪರಿಷತ್ತು’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಡಾ.ಬಿ. ಪ್ರಭಾಕರ ಶಿಶಿಲ ಇವರ ನಾಟಕ ಕೃತಿ ‘ಅಮರ ಸುಳ್ಯದ ಕ್ರಾಂತಿ 1837’ ಇದನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ರಾಶಿ ಎಂ.ಆರ್. ಲೋಕಾರ್ಪಣೆ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರತಿನಿಧಿಯಾದ ಶ್ರೀ ರಾಮಚಂದ್ರ ಪಲ್ಲತಡ್ಕ ಇವರು ಉಪಸ್ಥಿತರಿರುತ್ತಾರೆ. ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕ.ಸಾ.ಪ. ಸುಳ್ಯ ತಾಲೂಕು ಘಟಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.