ಬೆಂಗಳೂರು : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಮತ್ತು ಭಾರತೀಯ ಸ್ತ್ರೀ ಶಕ್ತಿ ಸಂಘಟನಾ ಟ್ರಸ್ಟ್ (ರಿ.) ಬೆಂಗಳೂರು ಇದರ ವತಿಯಿಂದ ‘ವೈದ್ಯರ ಸಾಹಿತ್ಯ ಸಮ್ಮೇಳನದ -2025’ ದಿನಾಂಕ 15 ಮಾರ್ಚ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿದೆ.
ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ, ಕಲಾ ಪ್ರದರ್ಶನ, ವಿಶೇಷ ಉಪನ್ಯಾಸ ಮತ್ತು ಗೌರವ ಪ್ರಶಸ್ತಿ ಪ್ರಧಾನ ಸನ್ಮಾನ ಸಮಾರಂಭ ನಡೆಯಲಿದ್ದು, ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ವೈದ್ಯರು ಹಾಗೂ ಸಾಹಿತಿಗಳಾದ ಡಾ. ನೀರಜಾ ನಾಗೇಂದ್ರ ಕುಮಾರ್ ಇವರು ಆಯ್ಕೆಯಾಗಿದ್ದು, ಇವರ ನೇತೃತ್ವದಲ್ಲಿ ಸಮ್ಮೇಳನ ನಡೆಯಲಿದೆ.