Subscribe to Updates

    Get the latest creative news from FooBar about art, design and business.

    What's Hot

    ಕನಕ ಕಾವ್ಯ ಗಮಕ ಸ್ಪರ್ಧೆಗೆ ಅರ್ಜಿ ಆಹ್ವಾನ

    July 10, 2026

    ಬೋಂದೆಲ್ ಕಲಾಗ್ರಾಮದಲ್ಲಿ ‘ಮಾರಿಕಾಡು’ ನಾಟಕ ಪ್ರದರ್ಶನ | ಜುಲೈ 13

    July 10, 2026

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಹಾಸ್ಯನಟ ಎಂ.ಎಸ್. ಉಮೇಶ್‌ ಇವರು ‘ಡಾ. ರಾಜ್ ಕುಮಾರ್ ಸಾಂಸ್ಕೃತಿಕ ದತ್ತಿ ಪ್ರಶಸ್ತಿ’ಗೆ ಆಯ್ಕೆ
    Awards

    ಹಾಸ್ಯನಟ ಎಂ.ಎಸ್. ಉಮೇಶ್‌ ಇವರು ‘ಡಾ. ರಾಜ್ ಕುಮಾರ್ ಸಾಂಸ್ಕೃತಿಕ ದತ್ತಿ ಪ್ರಶಸ್ತಿ’ಗೆ ಆಯ್ಕೆ

    February 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : 2023ನೆಯ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ‘ಡಾ. ರಾಜ್ ಕುಮಾರ್ ಸಾಂಸ್ಕೃತಿಕ ದತ್ತಿ ಪ್ರಶಸ್ತಿ’ಗೆ ಹಿರಿಯ ಕಲಾವಿದ ಎಂ.ಎಸ್. ಉಮೇಶ್ ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯು ಉಮೇಶ್ ಅವರನ್ನು ಡಾ. ರಾಜ್‌ಕುಮಾ‌ರ್ ಸಾಂಸ್ಕೃತಿಕ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು ರೂ.25,000/- ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ರಾಜ್ ಕುಮಾರ್ ಅವರು ತಮಗೆ ‘ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ’ ಬಂದಾಗ ನಗದು ಮೊತ್ತವನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿ ಸ್ಥಾಪಿಸಿದ್ದರು. ನಂತರದಲ್ಲಿ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರು ಈ ದತ್ತಿನಿಧಿಗೆ ಇನ್ನಷ್ಟು ಮೊತ್ತವನ್ನು ಸೇರಿಸಿದ್ದರು.

    ಚಿಕ್ಕ ವಯಸ್ಸಿನಲ್ಲೇ ರಂಗಭೂಮಿಯನ್ನು ಪ್ರವೇಶಿಸಿದ ಎಂ.ಎಸ್. ಉಮೇಶ್ ಇವರು ಕೆ. ಹಿರಣ್ಣಯ್ಯ ಮಿತ್ರ ಮಂಡಲಿಯಲ್ಲಿ ‘ಜಗಜ್ಯೋತಿ ಬಸವೇಶ್ವರ’ ನಾಟಕದಲ್ಲಿ ಬಾಲನಟರಾಗಿ ಹೆಸರು ಮಾಡುವ ಮೂಲಕ ಕಲಾರಂಗ ಪ್ರವೇಶಿಸಿದ್ದರು. ಗುಬ್ಬಿ ಕಂಪನಿಯಲ್ಲಿ ಕೂಡ ಬಾಲ ನಟನಾಗಿ ಪ್ರಸಿದ್ಧಿ ಪಡೆದ ಇವರು ಪುಟ್ಟಣ್ಣ ಕಣಗಾಲ್ ಇವರ ಕಥಾ ಸಂಗಮದ ಮೂಲಕ ಬೆಳ್ಳಿ ತೆರೆಗೆ ತೆರಳಿ ಈವರೆಗೂ ಸುಮಾರು 400ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿರುವ ಅವರು ಮುಖ್ಯವಾಗಿ ಹಾಸ್ಯ ಪಾತ್ರಗಳಿಗೆ ಘನತೆ ಗೌರವವನ್ನು ತಂದಿರುವುದರಲ್ಲದೆ, ರಾಜ್ ಕುಮಾರ್ ಅವರ ಕೊನೆಯ ಚಿತ್ರ ‘ಶಬ್ದವೇಧಿ’ಯವರೆಗೂ ಅಣ್ಣಾವ್ರ ಜೊತೆ ಅನೇಕ ಚಿತ್ರಗಳಲ್ಲಿ ಉಮೇಶ್ ಅಭಿನಯಿಸಿದ್ದಾರೆ. ಉತ್ತಮ ಹಾರ್ಮೋನಿಯಂ ವಾದಕ, ಗಾಯಕ ಕೂಡ ಆಗಿರುವ ಉಮೇಶ್ ಉತ್ತಮ ಬರಹಗಾರರೂ ಕೂಡ. ‘ಬಣ್ಣದ ಘಂಟೆ’ ಮತ್ತು ‘ಬೊಂಬೆಯಾಟವಯ್ಯ’ ಅವರ ಪ್ರಸಿದ್ಧ ಕೃತಿಗಳು. ಕಿರುತೆರೆಗೆ ಧಾರಾವಾಹಿಗಳನ್ನು ಬರೆದು ನಿರ್ದೇಶಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಕಲಾವಿದ ಶ್ರೀ ನಾಗೇಶ ಪ್ರಭುಗಳಿಗೆ ನುಡಿ ನಮನ
    Next Article ಪಡುಬೆಟ್ಟು ಶ್ರೀ ಬಾಲಸುಬ್ರಹ್ಮಣ್ಯ ಮಕ್ಕಳ ಯಕ್ಷಗಾನ ಮಂಡಳಿಯ ಉದ್ಘಾಟನೆ ಮತ್ತು ಮಕ್ಕಳ ರಂಗಪ್ರವೇಶ ಕಾರ್ಯಕ್ರಮ
    roovari

    Add Comment Cancel Reply


    Related Posts

    ಬೋಂದೆಲ್ ಕಲಾಗ್ರಾಮದಲ್ಲಿ ‘ಮಾರಿಕಾಡು’ ನಾಟಕ ಪ್ರದರ್ಶನ | ಜುಲೈ 13

    July 10, 2026

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026

    ಬೆಂಗಳೂರಿನ ರಂಗ ಶಂಕರದಲ್ಲಿ ‘ತುಘಲಕ್’ ನಾಟಕ ಪ್ರದರ್ಶನ | ಜುಲೈ 11

    July 9, 2026

    ಉಡುಪಿಯ ಐ.ವೈ.ಸಿ. ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ | ಜುಲೈ 11

    July 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.