ಬೆಂಗಳೂರು : ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಕನ್ನಡ ಉಪನ್ಯಾಸಕರು ಹಾಗೂ ಸಾಹಿತಿಗಳೂ ಆದ ಡಾ. ಎಸ್. ರಾಮಲಿಂಗೇಶ್ವರ (ಸಿಸಿರಾ) ಇವರು ಬೆಂಗಳೂರಿನ ಎನ್. ಆರ್. ಕಾಲೋನಿಯಲ್ಲಿ ಇರುವ ಪ್ರತಿಷ್ಠಿತ ಬಿ. ಎಂ. ಶ್ರೀ. ಪ್ರತಿಷ್ಠಾನದ ಕಾರ್ಯಕಾರಿ ಸಮಿತಿಯ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಆಯ್ಕೆ ಆಗಿರುತ್ತಾರೆ ಎಂದು ಬಿ. ಎಂ. ಶ್ರೀ. ಪ್ರತಿಷ್ಠಾನದ ಅಧ್ಯಕ್ಷರಾದ ಹಿರಿಯ ಸಾಹಿತಿ ಡಾ. ಬೈರಮಂಗಲ ರಾಮೇಗೌಡ ಹಾಗೂ ಕಾರ್ಯದರ್ಶಿ ಡಾ. ಶಾಂತರಾಜು ಈ ವಿಷಯವನ್ನು ತಿಳಿಸಿದ್ದಾರೆ.
ಸಾಹಿತಿಗಳಾಗಿ, ಸಾಂಸ್ಕೃತಿಕ ಚಿಂತಕರಾಗಿ, ಅವಿಭಜಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಆಗಿಯೂ ಸೇವೆ ಸಲ್ಲಿಸಿರುವ ಸಿಸಿರಾ ಇವರು ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ಸ್ಥಾಪಿಸಿಕೊಂಡು 1998 ರಿಂದಲೂ ಕನ್ನಡಪರವಾದ ಹಾಗೂ ಮಹಾತ್ಮ ಗಾಂಧೀಜಿ, ವಿವೇಕಾನಂದರ ವಿಚಾರಧಾರೆಗಳ ಪ್ರಸಾರ ಕಾರ್ಯದಲ್ಲಿ ತಮ್ಮನ್ನು ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಿರುತ್ತಾರೆ.
Subscribe to Updates
Get the latest creative news from FooBar about art, design and business.
ಡಾ.ಎಸ್.ರಾಮಲಿಂಗೇಶ್ವರ ಇವರು ಬಿ. ಎಂ. ಶ್ರೀ. ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆ
No Comments1 Min Read
Previous Articleಬುಕ್ ಬ್ರಹ್ಮ ಕಥಾ ಸ್ಪರ್ಧೆ 2025 – ʻಪೆರೇಡ್ ಪೊಡಿಮೋನುʼ ವಿಜೇತ ಕಥೆ