Subscribe to Updates

    Get the latest creative news from FooBar about art, design and business.

    What's Hot

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ
    Yakshagana

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 12, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಗಾನ ಕಲೆಯ ಮಹಾಪೋಷಕ, ನಿವೃತ್ತ ಐ.ಎ.ಎಸ್. ಅಧಿಕಾರಿ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ ಭಟ್ ಮುಂಬಯಿ ಯಕ್ಷಗಾನ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಂಬಯಿ ಅಜೆಕಾರು ಕಲಾಭಿಮಾನಿ ಬಳಗವು ತನ್ನ ರಜತ ವರ್ಷದ ಅಂಗವಾಗಿ 2026 ಅಕ್ಟೋಬರ್ 3 ಮತ್ತು 4ರಂದು ಮುಂಬೈ ಬಂಟರ ಭವನದಲ್ಲಿ ಎರಡು ದಿನಗಳ ಯಕ್ಷಗಾನ ಸಮ್ಮೇಳನವನ್ನು ಆಯೋಜಿಸಿದೆ. ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ ಇವರ ನೇತೃತ್ವದ ನಿಯೋಗವು ಡಾ. ಶ್ಯಾಮ ಭಟ್ ಇವರನ್ನು ಮಂಗಳೂರಿನ ಖಾಸಗಿ ಕಾರ್ಯಕ್ರಮದಲ್ಲಿ ಭೇಟಿಯಾಗಿ ಅವರಿಗೆ ಅಧಿಕೃತ ಆಹ್ವಾನ ನೀಡಿತು. ಸಮ್ಮೇಳನ ಸಮಿತಿಯ ಪ್ರಧಾನ ಸಲಹೆಗಾರರಾದ ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿಯವರು ಈ ಸಂದರ್ಭದಲ್ಲಿ ಶ್ಯಾಮ ಭಟ್ಟರನ್ನು ಶಾಲು ಹೊದಿಸಿ, ಹೂಗುಚ್ಛ ನೀಡಿ ಅಭಿನಂದಿಸಿದರು. ಪ್ರಧಾನ ಸಂಚಾಲಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಎರಡು ದಿನ ನಡೆಯಲಿರುವ ವಿವಿಧ ಗೋಷ್ಠಿಗಳು ಮತ್ತು ಯಕ್ಷಗಾನ ಪ್ರದರ್ಶನ – ಪ್ರಾತ್ಯಕ್ಷಿಕೆಗಳ ಬಗ್ಗೆ ವಿವರಿಸಿದರು.

    ಗೌರವ ಸ್ವೀಕರಿಸಿ ಮಾತನಾಡಿದ ಡಾ. ಟಿ. ಶ್ಯಾಮ ಭಟ್ “ಮುಂಬೈಯಲ್ಲಿ ಬಹು ವರ್ಷಗಳ ಬಳಿಕ ಬೃಹತ್ ಯಕ್ಷಗಾನ ಸಮ್ಮೇಳನ ಆಗುತ್ತಿರುವುದು ಸ್ವಾಗತಾರ್ಹ. ತಾನು ಯಕ್ಷಗಾನದ ವಿದ್ವಾಂಸನಲ್ಲದಿದ್ದರೂ ಅದರ ಬಗ್ಗೆ ಪ್ರೀತಿ, ಅಭಿಮಾನದಿಂದ ಕೈಲಾದ ಸೇವೆ ಮಾಡುತ್ತಿದ್ದೇನೆ. ಮುಂಬೈಯ ವಿವಿಧ ಕಡೆಗಳಲ್ಲಿ ಯಕ್ಷಗಾನ ತರಗತಿಗಳನ್ನು ನಡೆಸಿ ಹಲವಾರು ಉತ್ಸಾಹೀ ಕಲಾವಿದರನ್ನು ರೂಪಿಸಿರುವ ಯಕ್ಷ ಗುರು ಅಜೆಕಾರು ಬಾಲಕೃಷ್ಣ ಶೆಟ್ಟರ ಕಾರ್ಯ ಚಟುವಟಿಕೆಗಳಿಗೆ ಬೆಂಬಲವಾಗಿ ಈ ಹೊಣೆಯನ್ನು ವಹಿಸಿಕೊಳ್ಳುವೆ. ಎಳೆಯರಲ್ಲಿ ಯಕ್ಷಗಾನ ಜಾಗೃತಿಯನ್ನು ಮೂಡಿಸಿ ಮುಂದಿನ ತಲೆಮಾರು ಈ ಕಲೆಯನ್ನು ಪೋಷಿಸಿ, ವಿಸ್ತರಿಸುವ ನಿಟ್ಟಿನಲ್ಲಿ ಸಮ್ಮೇಳನ ಯಶಸ್ವಿಯಾಗಲಿ” ಎಂದು ನುಡಿದರು. ಹನುಮಗಿರಿ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಬಂಧಕ ಹರೀಶ ಭಟ್ ಬಳಂತಿಮೊಗರು ಮತ್ತು ಕಲಾವಿದ ಜಯಪ್ರಕಾಶ್ ಶೆಟ್ಟಿ ಪೆರ್ಮುದೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಡಾ. ಟಿ. ಶ್ಯಾಮ ಭಟ್ : ಬಂಟ್ವಾಳ ತಾಲೂಕು ಕೈರಂಗಳ ಗ್ರಾಮದ ಪ್ರತಿಷ್ಠಿತ ಕೃಷಿಕ ಕುಟುಂಬದಲ್ಲಿ ಜನಿಸಿರುವ ಡಾ. ಶ್ಯಾಮ ಭಟ್ಟರು ಯಕ್ಷಗಾನದ ಹಿನ್ನೆಲೆಯುಳ್ಳವರು. ಕಲೆ ಮತ್ತು ಕಲಾವಿದರ ಏಳ್ಗೆಗಾಗಿ ಸದಾ ತುಡಿಯುವ ಉದಾರಿ ಹಾಗೂ ಕೊಡುಗೈ ದಾನಿ. ಸರಕಾರಿ ಸೇವೆಯಲ್ಲಿದ್ದು ಅದರೊಂದಿಗೆ ಯಕ್ಷಗಾನ ಸೇವೆಯಲ್ಲೂ ನಿರಂತರವಾಗಿ ತೊಡಗಿಕೊಂಡಿರುವುದು ಅವರ ವಿಶೇಷತೆ. 1992ರ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಶ್ಯಾಮ ಭಟ್ 2002ರಲ್ಲಿ ಸಾರಿಗೆ ಇಲಾಖೆ ಅಂಡರ್ ಸೆಕ್ರೆಟರಿ ಆಗಿ, ನಂತರ ಪಂಚಾಯತ್ ರಾಜ್, ಮುಜರಾಯಿ ಇಲಾಖೆಗಳಲ್ಲಿ ಉಪ ಆಯುಕ್ತರಾಗಿ, ಉಡುಪಿ ಮತ್ತು ಬೀದರ್ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿ.ಡಿ.ಎ.) ಅಧ್ಯಕ್ಷರಾಗಿ, ಕೆ.ಪಿ.ಎಸ್ಸಿ. ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ನಿವೃತ್ತರಾದ ಬಳಿಕ ಪ್ರಸ್ತುತ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯಕ್ಷಗಾನ ಸಂಘಟನೆ ಹಾಗೂ ವೃತ್ತಿ ಮೇಳಗಳ ಸಂಚಾಲಕರಾಗಿ ಶ್ಯಾಮ ಭಟ್ ಇವರದು ಗಣನೀಯ ಸಾಧನೆ. ಹೊಸನಗರ, ಎಡನೀರು ಮೊದಲಾದ ಮೇಳಗಳನ್ನು ಯಶಸ್ವಿಯಾಗಿ ಮುನ್ನಡೆಸಿದ ಇವರು ಕಳೆದ ಹಲವು ವರ್ಷಗಳಿಂದ ತೆಂಕುತಿಟ್ಟಿನ ಅತ್ಯಂತ ಯಶಸ್ವಿ ತಂಡವೆನಿಸಿದ ಹನುಮಗಿರಿ ಮೇಳದ ವ್ಯವಸ್ಥಾಪಕರಾಗಿದ್ದಾರೆ. ಸಂಪಾಜೆಯ ಡಾ. ಕೀಲಾರು ಗೋಪಾಲಕೃಷ್ಣಯ್ಯ ಸ್ಮಾರಕ ಪ್ರತಿಷ್ಠಾನದ ಮೂಲಕ ಪ್ರತಿ ವರ್ಷ ‘ಸಂಪಾಜೆ ಯಕ್ಷೋತ್ಸವ’ವನ್ನು ಅದ್ದೂರಿಯಾಗಿ ನಡೆಸುವುದರೊಂದಿಗೆ ಅಹೋರಾತ್ರಿ ಯಕ್ಷಗಾನ ಬಯಲಾಟ ಮತ್ತು ಕಲಾವಿದರ ಸಂಮಾನ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಿದ್ದಾರೆ. ನೂರಾರು ಮಂದಿ ಯಕ್ಷಗಾನ ಕಲಾವಿದರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಆರ್ಥಿಕವಾದ ಶಕ್ತಿ ತುಂಬುತ್ತಿರುವ ಡಾ‌. ಶ್ಯಾಮ ಭಟ್ಟರು ‘ಕಲಾವಿದರ ಕಾಮಧೇನು’ ಎಂದೇ ಜನಪ್ರಿಯರಾಗಿದ್ದಾರೆ. ಇದೀಗ ಮುಂಬಯಿ ಯಕ್ಷಗಾನ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಇವರನ್ನು ಆಯ್ಕೆ ಮಾಡಿರುವುದು ಅದ್ವಿತೀಯ ಕಲಾಪೋಷಕರೊಬ್ಬರಿಗೆ ಲಭಿಸಿರುವ ಅತ್ಯಂತ ಸೂಕ್ತ ಗೌರವವಾಗಿದೆ.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕನಕದಾಸರ ಸಮಗ್ರ ಅನುವಾದ ಯೋಜನೆ: ತುಳು ಕೃತಿಗಳ ಬಿಡುಗಡೆ | ಮೇ 15
    Next Article ಭಕ್ತಿಯ ಪರಾಕಾಷ್ಠೆ ಮೆರೆದ ರಚನಾ ನಾರಾಯಣನ್‌ಕುಟ್ಟಿ ಇವರ ಕುಚಿಪುಡಿ ನೃತ್ಯ ವೈಭವ
    roovari

    Add Comment Cancel Reply


    Related Posts

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026

    ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್ ಪ್ರಶಸ್ತಿಗೆ ಲೇಖಕಿಯ ಆಯ್ಕೆ

    June 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.