Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಖ್ಯಾತ ಸಾಹಿತಿ ಹಾಗೂ ಸಂಶೋಧಕ ಡಾ. ವೀರಣ್ಣ ರಾಜೂರ

    June 4, 2025

    ಉದ್ಘಾಟನೆಗೊಂಡ ‘ಬಾಲಗಾನ ಯಶೋಯಾನ’ ಕಾರ್ಯಕ್ರಮ

    June 4, 2025

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ‘ಶಿಕ್ಷಣದಲ್ಲಿ ನಾಟಕ ಮತ್ತು ಕಲೆ’ ಮಾಹಿತಿ ಕಾರ್ಯಾಗಾರ
    Drama

    ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ‘ಶಿಕ್ಷಣದಲ್ಲಿ ನಾಟಕ ಮತ್ತು ಕಲೆ’ ಮಾಹಿತಿ ಕಾರ್ಯಾಗಾರ

    August 6, 2024Updated:August 7, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ವಿದ್ಯಾಗಿರಿ : ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ‘ಶಿಕ್ಷಣದಲ್ಲಿ ನಾಟಕ ಮತ್ತು ಕಲೆ’ಯ ಕುರಿತು ಕಾರ್ಯಾಗಾರವನ್ನು 31 ಆಗಸ್ಟ್ 2024ರಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.

    ಈ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್‌ರಾಮ್ ಸುಳ್ಯ ಇವರು “ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ. ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿ ನೃತ್ಯ, ಸಂಗೀತ, ನಾಟಕ, ಸೃಜನಶೀಲ ಬರವಣಿಗೆ, ರಂಗಭೂಮಿ ಇತ್ಯಾದಿಗಳು ಒಳಗೊಂಡಿರಬೇಕು. ನಾಟಕಗಳು ನಮ್ಮ ಸುತ್ತಮುತ್ತಲಿನ ಸುಂದರ ದೃಶ್ಯಗಳನ್ನು ನಮ್ಮ ಕಣ್ಣ ಮುಂದೆ ಸೃಷ್ಟಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ಕಲೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಸುಧಾರಿಸಲು ಸಹಾಯಕ. ಪ್ರದರ್ಶನದ ಕಲೆಗಳು ಮಕ್ಕಳಲ್ಲಿ ತಮ್ಮ ಭಾವನೆ ಮತ್ತು ಕಲ್ಪನೆಗಳನ್ನು ಹಾಗೂ ತಮ್ಮದೇ ಆದ ವಿಶಿಷ್ಟ ಧ್ವನಿಗಳನ್ನು ಅಭಿವೃದ್ಧಿ ಪಡಿಸಲು ಸಹಾಯ ಮಾಡುತ್ತವೆ. ನಾಟಕ ಮತ್ತು ಕಲೆ ವಿದ್ಯಾರ್ಥಿಗಳ ಆತ್ಮವಿಶ್ವಾಸ, ಸ್ವಯಂ ಅಭಿವ್ಯಕ್ತಿ, ಸಂತೋಷವನ್ನು ಕಂಡುಕೊಳ್ಳಲು ವಿಭಿನ್ನ ರೀತಿಯಲ್ಲಿ ಸಹಕರಿಸುತ್ತವೆ. ನಾಟಕ ಮತ್ತು ಕಲೆಯ ಮೂಲಕ ನಾವು ಕಲಿಯುವವರಿಗೆ ಇತರ ವಿಷಯಗಳನ್ನು ಹೆಚ್ಚು ಆಸಕ್ತಿಕರಗೊಳಿಸಬಹುದು. ಬೋಧನೆಯಲ್ಲಿ ವಿವಿಧ ವಿಷಯಗಳಲ್ಲಿ ಕಲೆ ಮತ್ತು ನಾಟಕಗಳನ್ನು ಬಳಸಬಹುದು. ಇದು ತರಗತಿಯಲ್ಲಿ ಸಕಾರಾತ್ಮಕ ಕಲಿಕೆಗೆ ದಾರಿ ಮಾಡಿಕೊಡುತ್ತದೆ. ನಮ್ಮ ಜೀವನದಲ್ಲಿ ಎಷ್ಟೇ ಪ್ರಶಂಸೆ, ಹೊಗಳಿಕೆಯನ್ನು ಗಳಿಸಿದರೂ ಕೂಡ ಎತ್ತರದ ಸ್ಥಾನದಲ್ಲಿದ್ದರೂ ಕೂಡ ನಾವು ವಿದ್ಯಾರ್ಥಿಗಳಾಗಿಯೇ ಇದ್ದು, ಹೊಸ ಹೊಸ ವಿಷಯಗಳನ್ನು, ಅನುಭವಗಳನ್ನು ಪಡೆದುಕೊಳ್ಳುತ್ತಾ ಹೋಗಬೇಕು. ಶಿಕ್ಷಕರಾದವರು ಉತ್ಸಾಹಿಯಾಗಿರಬೇಕು. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ನೀಡುವವರಾಗಿರಬೇಕು. ಶಿಕ್ಷಕನಾದವನು ಉತ್ಸಾಹದ ಚಿಲುಮೆಯಾಗಿರಬೇಕು, ಸದಾ ಏನೋ ಹೊಸತನ್ನು ಕಲಿಯಲು ಹಾತೊರೆಯುತ್ತಿರಬೇಕು” ಎಂದು ತಿಳಿಸಿದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ “ಶಿಕ್ಷಕರಾದವರು ಕಲೆಗಾರರು, ನಾಟಕಗಾರರು ಆಗಿರಬೇಕು. ಯಾವುದೇ ವಿಷಯವನ್ನು ಕಲೆ ಮತ್ತು ನಾಟಕದ ಮೂಲಕ ಕಲಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ವಿಷಯವನ್ನು ಮನ ಮುಟ್ಟವಂತೆ ತಿಳಿಸಲು ಸಾಧ್ಯ” ಎಂದರು.

    ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಬಿ.ಎಡ್. ಕಾಲೇಜಿನ ಪ್ರಾಂಶುಪಾಲ ಡಾ. ಶಂಕರಮೂರ್ತಿ ಹೆಚ್.ಕೆ. ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಜಾನೆಟ್ ಸ್ವಾಗತಿಸಿ, ಅಪೂರ್ವ ವಂದಿಸಿ, ಕಾವ್ಯ ಕೆ. ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸಂಗೀತ ಅಕಾಡೆಮಿ ಶಿಷ್ಯವೇತನಕ್ಕೆ ವೀಡಿಯೋ ಮೂಲಕ ಅರ್ಜಿ ಆಹ್ವಾನ 
    Next Article 2024ನೇ ಸಾಲಿನ ‘ಕೇಶವ ಪ್ರಶಸ್ತಿ’ಗೆ ಹಿರಿಯ ಲೇಖಕಿ ಡಾ. ಮಹೇಶ್ವರಿ ಯು. ಕಾಸರಗೋಡು ಆಯ್ಕೆ
    roovari

    Comments are closed.

    Related Posts

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025

     ಮಂಗಳೂರು ವಿವಿಯಲ್ಲಿ ಪ್ರೊ. ವಿವೇಕ ರೈಗಳಿಗೆ ಅಭಿವಂದನೆ

    June 4, 2025

    ಕಲಾಂಗಣದಲ್ಲಿ ಕೊಂಕಣಿ ಕಾರ್ಯಕ್ರಮಗಳು

    June 4, 2025

    ಪುಸ್ತಕ ವಿಮರ್ಶೆ | ಡಾ. ಪಾದೇಕಲ್ಲು ವಿಷ್ಣು ಭಟ್ಟ ಇವರ ವಿಮರ್ಶಾ ಕೃತಿ ‘ಗ್ರಂಥಾಲೋಕ’

    June 4, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.