ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಶಿವಮೊಗ್ಗ ಮತ್ತು ಡಿ. ದೇವರಾಜು ಅರಸು ಮೆಟ್ರಿಕ್ ನಂತರ ವಿದ್ಯಾರ್ಥಿನಿ ನಿಲಯ ಶಿವಮೊಗ್ಗ ಇವರ ವತಿಯಿಂದ ‘ದತ್ತಿ ನಿಧಿ ಕಾರ್ಯಕ್ರಮ’ವನ್ನು ದಿನಾಂಕ 27 ಮಾರ್ಚ್ 2025ರಂದು ಶಿವಮೊಗ್ಗದ ಡಿ. ದೇವರಾಜು ಅರಸು ಮೆಟ್ರಿಕ್ ನಂತರ ವಿದ್ಯಾರ್ಥಿನಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀ ರಾಮಭಟ್ಟ ಮತ್ತು ಶ್ರೀಮತಿ ದೇವಕಮ್ಮ ದತ್ತಿ ಹಾಗೂ ಶ್ರೀ ಆನಂದಪುರಂ ಜಗದ್ಗುರು ಗುರುಬಸವ ಮಹಾಸ್ವಾಮಿಗಳ ದತ್ತಿ ಉಪನ್ಯಾಸ ನಡೆಯಲಿದೆ. ಈ ಕಾರ್ಯಕ್ರಮವನ್ನು ಖ್ಯಾತ ವೈದ್ಯರಾದ ಡಾ. ಪಿ. ನಾರಾಯಣ ಇವರು ಉದ್ಘಾಟನೆ ಮಾಡಲಿದ್ದು, ‘ಆರೋಗ್ಯ ಮತ್ತು ಸಾಹಿತ್ಯ’ ಎಂಬ ವಿಷಯದ ಬಗ್ಗೆ ಶಿವಮೊಗ್ಗದ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಡಿ. ಮಂಜುನಾಥ ಮತ್ತು ‘ಕೆಳದಿ ಸಂಸ್ಥಾನದ ಆಡಳಿತ ಮಹತ್ವ’ ಎಂಬ ವಿಷಯದ ಬಗ್ಗೆ ವಿಶ್ರಾಂತ ಸಹ ಪ್ರಾಧ್ಯಾಪಕರಾದ ಡಾ. ಕೆ.ಜಿ. ವೆಂಕಟೇಶ್ ಇವರು ವಿಷಯ ಮಂಡನೆ ಮಾಡಲಿರುವರು.