ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಮತ್ತು ಶಾರದಾ ಪದವಿಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಹಿತಿ ಭಾ.ಭ. ಮಜಿಬೈಲು ‘ದತ್ತಿ ಉಪನ್ಯಾಸ ಕಾರ್ಯಕ್ರಮ’ವನ್ನು ದಿನಾಂಕ 04 ಜುಲೈ 2026ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಮಂಗಳೂರಿನ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ಇವರು ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಯಕ್ಷಗಾನ, ಜಾನಪದ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಭಾಸ್ಕರ ರೈ ಕುಕ್ಕುವಳ್ಳಿ ಇವರು ಉಪನ್ಯಾಸ ನೀಡಲಿದ್ದಾರೆ.

