ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಶಿವಮೊಗ್ಗ ಇದರ ವತಿಯಿಂದ ಮತ್ತು ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಇವರ ಸಹಯೋಗದಲ್ಲಿ ದತ್ತಿನಿಧಿ ಕಾರ್ಯಕ್ರಮವನ್ನು ದಿನಾಂಕ 13 ಫೆಬ್ರವರಿ 2026ರಂದು ಸಂಜೆ 6-00 ಗಂಟೆಗೆ ಶಿವಮೊಗ್ಗದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀ ಶಂಕರನಾರಾಯಣ ಉಪಾಧ್ಯಾ ದತ್ತಿ ಮತ್ತು ದಿ. ಶ್ರೀಮತಿ ಜಯಮ್ಮ ಮತ್ತು ದಿ. ಕರಿಯಪ್ಪ ಅಡಗಡಿ ಗ್ರಾಮ ಮಂಡಗಟ್ಟ ಆಯನೂರು ದತ್ತಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ದೊಡ್ಡಮತ್ತಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ವೀಣಾ ವಸಂತ್ ಇವರ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಉದ್ಘಾಟನೆ ಮಾಡಲಿದ್ದಾರೆ. ‘ಸಮಾಜ ಸೇವೆಯಲ್ಲಿ ಯುವಜನರ ಪಾತ್ರ’ ಎಂಬ ವಿಷಯದ ಬಗ್ಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಕಂದಯಾಧಿಕಾರಿ ಡಿ. ನಾಗೇಂದ್ರ ಮತ್ತು ‘ಸಂವಿಧಾನದ ಅಶಯಗಳು ಈ ಹೊತ್ತಿನ ಭಾರತ’ ಎಂಬ ವಿಷಯದ ಬಗ್ಗೆ ಪ್ರಾಚಾರ್ಯರಾದ ಡಾ. ಬಿ.ಎಲ್. ರಾಜು ಇವರು ಉಪನ್ಯಾಸ ನೀಡಲಿದ್ದಾರೆ.

