Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರಂಗಶಂಕರದಲ್ಲಿ ‘ಮಣ್ಣಿನ ಮಗ’ | ಸೆಪ್ಟೆಂಬರ್ 16

    September 15, 2026

    ಪುಸ್ತಕ ವಿಮರ್ಶೆ | ವಚನ ಸಾಹಿತ್ಯದ ಗುಣಾತಿಶಯಗಳ ಗುರುತಿಸುವಿಕೆ

    September 15, 2026

    ಸಾರ್ವಜನಿಕ ಗಣೇಶೋತ್ಸವದಲ್ಲಿ ‘ಯಕ್ಷ ಶ್ರಾವಣ -6’ ತಾಳಮದ್ದಳೆ

    September 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ
    Competition

    ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ

    September 15, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೈಬುಲಿರ ಪಾರ್ವತಿ ಬೋಪಯ್ಯರವರು ಸ್ಥಾಪಿಸಿರುವ ದಿ. ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ದತ್ತಿನಿಧಿ ಕಾರ್ಯಕ್ರಮದಂತೆ ಕೊಡಗು ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಮತ್ತು ಕನ್ನಡ ನಾಡು, ನುಡಿ, ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಜಿಲ್ಲೆಯ ಶಾಲೆ ಕಾಲೇಜುಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    ಕೊಡಗು ಜಿಲ್ಲೆಯ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಒಂದು ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಬಹುದು. ಈ ಕೆಳಗೆ ಸೂಚಿಸಿರುವ ನಾಲ್ಕು ವಿಚಾರದಲ್ಲಿ ಒಂದು ವಿಷಯಕ್ಕೆ ಸಂಬಂಧಪಟ್ಟಂತೆ ಎರಡು ಪುಟ ಮೀರದಂತೆ ಪ್ರಬಂಧವನ್ನು ಸ್ವಹಸ್ತದಿಂದ ಬರೆದು ಈ ಕೆಳಗಿನ ವಿಳಾಸಕ್ಕೆ ದಿನಾಂಕ 15 ಸೆಪ್ಟೆಂಬರ್ 2026ರ ಒಳಗಾಗಿ ತಲುಪುವಂತೆ ಅಂಚೆ/ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ ಕಳುಹಿಸಿಕೊಡತಕ್ಕದ್ದು.
    ೧. ಕನ್ನಡ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ
    ೨. ಸಾಹಿತ್ಯ ಮತ್ತು ಸಮಾಜ
    ೩. ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಿಕೆಗಳ ಪಾತ್ರ
    ೪. ಕೊಡಗಿನಲ್ಲಿ ಕನ್ನಡವನ್ನು ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ

    ಪ್ರಬಂದ ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ್ ವೃತ್ತ, ಮಡಿಕೇರಿ – 571201, ಮೊಬೈಲ್ ಸಂಖ್ಯೆ : 9113892396, ಇಮೇಲ್ ಅಡ್ರೆಸ್ : [email protected]

    ವಿಜೇತ ಪ್ರಬಂಧಕ್ಕೆ ಪ್ರಥಮ, ದ್ವಿತೀಯ, ತೃತೀಯ ಮೂರು ಬಹುಮಾನಗಳನ್ನು ಮತ್ತು ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ತಿಳಿಸಿದ್ದಾರೆ.

    baikady competition Essay Literature roovari
    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯ ವಿಮರ್ಶೆ | ಮನಸೆಳೆದ ವೈವಿಧ್ಯಪೂರ್ಣ ಚೇತೋಹಾರಿ ‘ನೃತ್ಯ ಸಮಾಗಮ’
    Next Article Theatre workshop at Mangaluru by Trisha D. Shetty
    roovari

    Add Comment Cancel Reply


    Related Posts

    ಬೆಂಗಳೂರಿನ ರಂಗಶಂಕರದಲ್ಲಿ ‘ಮಣ್ಣಿನ ಮಗ’ | ಸೆಪ್ಟೆಂಬರ್ 16

    September 15, 2026

    ಪುಸ್ತಕ ವಿಮರ್ಶೆ | ವಚನ ಸಾಹಿತ್ಯದ ಗುಣಾತಿಶಯಗಳ ಗುರುತಿಸುವಿಕೆ

    September 15, 2026

    ಸಾರ್ವಜನಿಕ ಗಣೇಶೋತ್ಸವದಲ್ಲಿ ‘ಯಕ್ಷ ಶ್ರಾವಣ -6’ ತಾಳಮದ್ದಳೆ

    September 15, 2026

    ಮೈತ್ರೇಯ ಆಯುರ್ವೇದ ಆಶ್ರಮದಲ್ಲಿ ಯಕ್ಷಗಾನ ಪ್ರದರ್ಶನ

    September 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.