ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ (ಮಾಹೆ), ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ ಹಾಗೂ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ವಿಸ್ತರಣಾ ಉಪನ್ಯಾಸ ಮಾಲಿಕೆ 2025’ ಕಾರ್ಯಕ್ರಮವು ದಿನಾಂಕ 25 ಆಗಸ್ಟ್ 2025 ಶನಿವಾರದಂದು ಮಧ್ಯಾಹ್ನ ಗಂಟೆ 2-45ಕ್ಕೆ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ‘ಕನಕದಾಸರು – ವರ್ತಮಾನದ ಮುಖಾಮುಖಿ’ ಎಂಬ ವಿಷಯದ ಬಗ್ಗೆ ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಸುಧಾಕರ ದೇವಾಡಿಗ ಬಿ. ಇವರು ಉಪನ್ಯಾಸ ನೀಡಲಿದ್ದಾರೆ.