ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2024-25ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಹರಿಂದ ಅರ್ಜಿಯನ್ನು 15 ಸೆಪ್ಟೆಂಬರ್ 2024ರವರೆಗೆ ದಂಡದ ಶುಲ್ಕ ರೂ.50/- ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿತ್ತು. ಸಾರ್ವಜನಿಕರ ಹಿತಾಸಕ್ತಿ ಮೇರೆಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕ 30-09-20224ರ ಅವಧಿಯನ್ನು ವಿಸ್ತರಿಸಲಾಗಿದೆ. ಪರೀಕ್ಷಾರ್ಥಿಗಳು ಇದರ ಸದುಪಯೋಗವನ್ನು ಪಡೆಯಬಹುದು.
ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ರೂ.25/- ಶುಲ್ಕ ಪಾವತಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ಪಡೆಯಬಹುದು.
ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಇವರು ನಿಗದಿತ ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25/-ಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕು.
ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು – 560018 ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣಗಳಾದ
ಫೇಸ್ ಬುಕ್ : https://www.facebook.com/kasapaofficial,
https://www.facebook.com/KannadaSahityaParishattu
ಟ್ವಿಟರ್ : https://twitter.com/kannadaparishat
ಕೂ ಆಪ್ : https://www.kooapp.com/profile/kasapa
ಇನ್ ಸ್ಟಾಗ್ರಾಮ್ : https://www.instagram.com/kannadasahityaparishattu
ವೆಬ್ ಸೈಟ್ : https://kannadasahithyaparishattu.in
ದೂರವಾಣಿ ಸಂಖ್ಯೆ : 080 -26612991, 22423867, 26623548
ಇವುಗಳ ಮೂಲಕವೂ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.