Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಯಕ್ಷಸಾಧಕ’ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಆಯ್ಕೆ
    Awards

    ‘ಯಕ್ಷಸಾಧಕ’ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಆಯ್ಕೆ

    July 16, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ (ರಿ.) ಪ್ರಾಯೋಜಿತ ಗುರು ಮಟಪಾಡಿ ವೀರಭದ್ರ ನಾಯಕ್‌ ‘ಯಕ್ಷಸಾಧಕ ಪ್ರಶಸ್ತಿ’ಯನ್ನು ಯಕ್ಷಗಾನ ಕೇಂದ್ರ, ಶಿವಪ್ರಭಾ, ಶ್ರೀವಾದಿರಾಜ ವನಂ ಹಯಗ್ರೀವ ನಗರ ಇಂದ್ರಾಳಿ ಇವರ ಸಹಯೋಗದಲ್ಲಿ ಕೊಡಮಾಡಲಿದ್ದು, 2026ನೇ ವರ್ಷದ ಪ್ರಶಸ್ತಿಗೆ ಖ್ಯಾತ ಯಕ್ಷಗಾನ ಕಲಾವಿದ ಶ್ರೀಯುತ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಇವರು ಆಯ್ಕೆಯಾಗಿದ್ದಾರೆ.

    ಪ್ರಶಸ್ತಿಯು ರೂ.25,000/- ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿಯನ್ನು ದಿನಾಂಕ 01 ಆಗಸ್ಟ್ 2026ರಂದು ಸಂಜೆ 4-00 ಗಂಟೆಗೆ, ಉಡುಪಿ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

    ಕರ್ನಾಟಕದ ಅತ್ಯಂತ ಪ್ರತಿಭಾವಂತ ಮತ್ತು ಜನಪ್ರಿಯ ಸ್ತ್ರೀ ವೇಷಧಾರಿ ಎಂದೇ ಪ್ರಸಿದ್ಧರಾದ ಸುಬ್ರಹ್ಮಣ್ಯ ಹೆಗಡೆ ಇವರು ಹೊನ್ನಾವರ ತಾಲೂಕಿನ ಯಲಗುಪ್ಪದಲ್ಲಿ ಶ್ರೀ ವಿಷ್ಣು ಹೆಗಡೆ ಹಾಗೂ ಶ್ರೀಮತಿ ಇಂದಿರಾ ಹೆಗಡೆಯವರ ಮಗನಾಗಿ ಜನಿಸಿದರು. ಇವರು ಕನ್ನಡ ಸ್ನಾತಕೋತ್ತರ ಪದವೀಧರರಾಗಿದ್ದ, ಇವರ ಯಕ್ಷಗಾನ ಗುರು ಶ್ರೀ ಹೆರಂಜಾಲು ವೆಂಕಟರಮಣ ಗಾಣಿಗರು. ಗುಂಡಬಾಳ ಮೇಳ, ಮಂದಾರ್ತಿ, ಮಾರಣಕಟ್ಟೆ, ಕಮಲಶಿಲೆ, ಸಾಲಿಗ್ರಾಮ, ಹೊಸನಗರ ಮೇಳಗಳಲ್ಲಿ ತಿರುಗಾಟ ಮಾಡಿ ಪ್ರಸ್ತುತ ಪೆರ್ಡೂರು ಮೇಳದಲಿ ಯಕ್ಷಗಾನ ಕಲಾ ಸೇವೆಯನ್ನು ಮಾಡುತ್ತಿದ್ದಾರೆ. ಅಲ್ಲದೆ ಯಕ್ಷಗಾನ ಕಲೆಯನ್ನು ಹೊರದೇಶಗಳಲ್ಲಿಯೂ ಪಸರಿಸುವುದಕ್ಕೆ ಕಾರಣರಾಗಿದ್ದಾರೆ. ಎಲ್ಲಾ ಸ್ತ್ರೀ ವೇಷಗಳಲ್ಲಿ ಪ್ರಸಿದ್ಧರಾದ ಶ್ರೀ ಹೆಗಡೆಯವರು ಮುಖ್ಯವಾಗಿ ಪ್ರಭಾವತಿ, ಮೇನಕೆ, ರಂಭೆ, ದಾಕ್ಷಾಯಣಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಯಕ್ಷಗಾನದಲ್ಲಿ ಹರಿವಾಣ ನೃತ್ಯ ಇವರ ವಿಶೇಷತೆಯಾಗಿದ್ದು, ಯಕ್ಷಗಾನ ಹಾಡುಗಾರಿಕೆ ಹಾಗೂ ಪುರುಷವೇಷಗಳ ನಿರ್ವಹಣೆಯಲ್ಲಿ ಸೈ ಎನಿಸಿಕೊಂಡಿದ್ದಾರೆ. ವ್ಯಾಕರಣಶುದ್ಧ ಶಬ್ದೋಚ್ಚಾರ, ಪ್ರೌಢ ಮಾತುಗಾರಿಕೆ, ಯಕ್ಷಗಾನ ಶೈಲಿಯ ಕಂಠಸ್ವರ, ಪಾತ್ರದ ಚೌಕಟ್ಟಿನೊಳಗೇ ನಿರೂಪಣೆ, ನಾಜೂಕು ಅಭಿನಯದ ಮೂಲಕ ಜನಮನ್ನಣೆ ಗಳಿಸಿದ ಇವರನ್ನು ಅನೇಕ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ.

    award baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ | ಕರ್ನಾಟಕದ ಯಶಸ್ವೀ ಮಹಿಳಾ ಲೇಖಕಿ – ನೇಮಿಚಂದ್ರ ಮಲ್ಹೋತ್ರ
    Next Article ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್
    roovari

    Add Comment Cancel Reply


    Related Posts

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026

    ವಿಶೇಷ ಲೇಖನ | ಕರ್ನಾಟಕದ ಯಶಸ್ವೀ ಮಹಿಳಾ ಲೇಖಕಿ – ನೇಮಿಚಂದ್ರ ಮಲ್ಹೋತ್ರ

    July 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.