ಕುಂದಾಪುರ : ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಉಡುಪಿ ವಲಯ ಸಹಯೋಗದಲ್ಲಿ ಹಿರಿಯಡ್ಕದಲ್ಲಿ ದಿನಾಂಕ 28 ಜೂನ್ 2025ರಂದು ನಡೆದ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರದಲ್ಲಿ ಗಂಗೊಳ್ಳಿಯ ಸ್ಯಾಕ್ಸೋಫೋನ್ ಮತ್ತು ಚಿತ್ರಕಲಾ ಬಾಲ ಪ್ರತಿಭೆ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಇವರನ್ನು ಸನ್ಮಾನಿಸಲಾಯಿತು.
ಜಮ್ಮು ಕಾಶ್ಮೀರ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಶ್ ಪ್ರಸಾದ್ ಐ.ಎ.ಎಸ್., ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ಮಂಜುನಾಥ ಭಟ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಲೋಕೇಶ್ ಸಿ., ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪ್ರಾಂಶುಪಾಲ ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಕೃಷಿ ಅರ್ಥಶಾಸ್ತ್ರಜ್ಞ ಎನ್.ಎಸ್. ಶೆಟ್ಟಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಯೋಗ ನರಸಿಂಹ ಸ್ವಾಮಿ, ಶಾಲಾ ಶಿಕ್ಷಣ ಇಲಾಖೆಯ ನಾಗರಾಜ್, ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಬಿ.ಎಲ್. ವಿಶ್ವಾಸ ಭಟ್, ಉಪ ಪ್ರಾಂಶುಪಾಲ ಪ್ರಕಾಶ್ ಪ್ರಭು, ಕುಂದಾಪುರ ತಾಲೂಕು ಚಿತ್ರಕಲಾ ಶಿಕ್ಷಕರ ಒಕ್ಕೂಟ ಅಧ್ಯಕ್ಷ ಪ್ರಶಾಂತ್ ಬಿ.ಪಿ. ಹಾಗೂ ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಅಧ್ಯಕ್ಷ ಮೋಹನ್ ಕಡಬ ಮೊದಲಾದವರು ಉಪಸ್ಥಿತರಿದ್ದರು.