ಬಿ.ಸಿ. ರೋಡ್ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು- ಬಂಟ್ವಾಳ ತಾಲೂಕು ಘಟಕದ ಪ್ರಥಮ ವಾರ್ಷಿಕೋತ್ಸವು ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ 07-05-2024ರಂದು ನಡೆಯಿತು. ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ ಬಿ.ಸಿ. ರೋಡ್, ರಂಗಭೂಮಿ ಕಲಾವಿದ ರಮಾ ಬಿ.ಸಿ. ರೋಡ್, ನಾಟಿವೈದ್ಯೆ ಶ್ರೀಮತಿ ಮೀನಾಕ್ಷಿ ಆಚಾರ್ಯ ಇವರನ್ನು ಗೌರವ ಧನದೊಂದಿಗೆ ಸಂಮಾನಿಸಲಾಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವರಾದ ಬಿ. ರಮಾನಾಥ ರೈ ಮುಖ್ಯ ಅಭ್ಯಾಗತರಾಗಿದ್ದರು. ಬಂಟ್ವಾಳ ಘಟಕದ ವತಿಯಿಂದ ಪಟ್ಲ ಫೌಂಡೇಶನ್’ನ ಕೇಂದ್ರೀಯ ಸಮಿತಿಗೆ ರೂ. 50,000/- ದೇಣಿಗೆಯಾಗಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರು ಒಂದು ಮನೆ ನಿರ್ಮಾಣದ ವೆಚ್ಚವನ್ನು ನೀಡುವುದಾಗಿ ಘೋಷಿಸಿದರು. ಘಟಕದ ಅಧ್ಯಕ್ಷರಾದ ಚಂದ್ರಹಾಸ ಡಿ. ಶೆಟ್ಟಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಗೌರವಾಧ್ಯಕ್ಷರಾದ ಜಗನ್ನಾಥ ಚೌಟರು ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಪ್ರೊ. ಪವನ್ ಕಿರಣ್ ಕೆರೆ ವಿರಚಿತ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಿತು.