ಬಾಗಲಕೋಟೆ : ಕನ್ನಡ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಬಾಗಲಕೋಟೆ ಮತ್ತು ಮಹಿಳಾ ತಾಲೂಕು ಘಟಕ ಮುಧೋಳ ಹಾಗೂ ಲೋಕಾಪೂರ ಇವರ ವತಿಯಿಂದ ‘ಪ್ರಥಮ ಕನ್ನಡ ಜಾನಪದ ಮಹಿಳಾ ಸಮ್ಮೇಳನ -2025’ವನ್ನು ದಿನಾಂಕ 05 ಅಕ್ಟೋಬರ್ 2025ರಂದು ಬಾಗಲಕೋಟೆ ಲೋಕಾಪೂರದ ಎ.ಪಿ.ಎಂ.ಸಿ. ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀಮತಿ ಯಲ್ಲವ್ವ ರೊಡ್ಡಪ್ಪನವರ ಸಮ್ಮೇಳನಾಧ್ಯಕ್ಷರಾಗಿರುತ್ತಾರೆ.
ಧ್ವಜಾರೋಹಣ ಮತ್ತು ಸಮ್ಮೇಳನಾಧ್ಯಕ್ಷರ ಮೆರವಣಿಗೆಯೊಂದಿಗೆ ಪ್ರಾರಂಭವಾಗುವ ಈ ಸಮ್ಮೇಳನವನ್ನು ಕನ್ನಡ ಜಾನಪದ ಪರಿಷತ್ ಇದರ ರಾಜ್ಯಾಧ್ಯಕ್ಷರಾದ ಡಾ. ಎಸ್. ಬಾಲಾಜಿ ಇವರ ಅಧ್ಯಕ್ಷತೆಯಲ್ಲಿ ಸಚಿವರಾದ ಆರ್.ಬಿ. ತಿಮ್ಮಾಪೂರ ಇವರು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಸಚಿವರಾದ ಮುರರೇಶ ಆರ್. ನಿರಾಣಿ ಇವರು ‘ಜಾನಪದ ಸಿರಿ’ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಪಾರಿಜಾತ ಕಲಾನಿಧಿ ‘ಬರಗಿ ರಾಚಯ್ಯ’ ಕವನ ಸಂಕಲನ ಬಿಡುಗಡೆಯಾಗಲಿದೆ. ಮಧ್ಯಾಹ್ನ 12-00 ಗಂಟೆಗೆ ನಡೆಯುವ ಗೋಷ್ಠಿಯಲ್ಲಿ ‘ಸಮ್ಮೇಳನಾಧ್ಯಕ್ಷರ ಬದುಕು ಹಾಗೂ (ಸಾಧನೆ) ನಡೆದು ಬಂದ ದಾರಿ’ ಬಗ್ಗೆ ಸಾಹಿತಿ ಅನಿತಾ ರಾಮನಗೌಡ ಪಾಟೀಲ ವಿಷಯ ಮಂಡನೆ ಮಾಡಲಿದ್ದಾರೆ. ಕನ್ನಡ ಜಾನಪದ ಪರಿಷತ್ ಮುಧೋಳ ಘಟಕದ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮೀ ಎಂ. ಹಾರೂಗೊಪ್ಪ ಇವರ ಅಧ್ಯಕ್ಷತೆಯಲ್ಲಿ ಬಹಿರಂಗ ಅಧಿವೇಶನ ನಡೆಯಲಿದೆ. ಮಧ್ಯಾಹ್ನ 03-00 ಗಂಟೆಗೆ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಸಮಾರಂಭ ಮತ್ತು 6-00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಮೆರವಣಿಗೆ ಮತ್ತು ವೇದಿಕೆಯಲ್ಲಿ ವಿವಿಧ ಕಲಾತಂಡಗಳು ಜಾನಪದ ಕಲಾ ಪ್ರದರ್ಶನ ನೀಡಲಿದ್ದಾರೆ.