ಹೊಸನಗರ : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಜಿಲ್ಲಾ ಸಮಿತಿ ಶಿವಮೊಗ್ಗ, ತಾಲೂಕು ಸಮಿತಿ ಹೊಸನಗರ ಮತ್ತು ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸನಗರ ಕನ್ನಡ ವಿಭಾಗ ಇವರ ಸಹಯೋಗದಲ್ಲಿ ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ ಮತ್ತು ಉಪನ್ಯಾಸ’ ಕಾರ್ಯಕ್ರಮವನ್ನು ದಿನಾಂಕ 22 ಆಗಸ್ಟ್ 2025ರಂದು ಬೆಳಿಗ್ಗೆ 11-00 ಗಂಟೆಗೆ ಹೊಸನಗರ ಕೊಡಚಾದ್ರಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಉಮೇಶ್ ಕೆ. ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಸಮಿತಿ ಹೊಸನಗರ ಇದರ ಅಧ್ಯಕ್ಷರಾದ ಎಂ.ಎಂ. ಪರಮೇಶ್ವರ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ಕೆ. ಶ್ರೀಪತಿ ಹಳಗುಂದ ಇವರು ಉಪನ್ಯಾಸ ನೀಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಜಾನಪದ ಕಲಾ ಪ್ರದರ್ಶನ ಪ್ರಸ್ತುತಗೊಳ್ಳಲಿದೆ.