ನಾಪೋಕ್ಲು : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ ಹಾಗೂ ಕನ್ನಡ ವಿಭಾಗದ ವತಿಯಿಂದ ಜನಪದೋತ್ಸವ ಕಾರ್ಯಕ್ರಮವು ದಿನಾಂಕ 07 ಮಾರ್ಚ್ 2025 ರಂದು ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಉಪನ್ಯಾಸಕರಾದ ಕೆ.ಹರಣಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜನಪದದ ಮಹತ್ವ ಮತ್ತು ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸಲಾಯಿತು. ಸಭಾಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಸಂಚಾಲಕರಾದ ಡಾ. ಸಹನಾ ದಿನೇಶ್ ಹಾಗೂ ಬೋಧಕ ಬೋಧಕೇತರ ವರ್ಗದವರಿಂದ ಆಯೋಜಿಸಿದ ವಿವಿಧ ಜಾನಪದ ನೃತ್ಯ, ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಂಡು ಜನಪದದ ಸಗಡನ್ನು ಸವಿದರು. ಈ ಸಂದರ್ಭ ಪ್ರಾಂಶುಪಾಲರಾದ ಮನೋಜ್ ಕುಮಾರ್, ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.