Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    ವಿಶೇಷ ಲೇಖನ | ಮುಂಬೈ ಕನ್ನಡಿಗ, ಪತ್ರಕರ್ತನ ಸಾಧನೆ

    May 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಜಾನಪದ ಗಾಯಕ ಗಣೇಶ್ ಗಂಗೊಳ್ಳಿ ನಿಧನ
    Folk

    ಜಾನಪದ ಗಾಯಕ ಗಣೇಶ್ ಗಂಗೊಳ್ಳಿ ನಿಧನ

    April 8, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರು ಹಾಗೂ ಖ್ಯಾತ ಜಾನಪದ ಕಲಾವಿದರಾದ ಡಾ. ಗಣೇಶ್ ಗಂಗೊಳ್ಳಿ (64) ಇವರು ದಿನಾಂಕ 07 ಏಪ್ರಿಲ್ 2026ರಂದು ವಿಧಿವಶರಾದರು. ಆಕಾಶವಾಣಿ ಜಾನಪದ ಕಲಾವಿದರಾಗಿದ್ದ ಗಣೇಶ್ ಗಂಗೊಳ್ಳಿ, ಶಾಲಾ ಕಾಲೇಜು ಕಾರ್ಯಕ್ರಮಗಳಲ್ಲಿ ಹಾಡುತ್ತಿದ್ದರು. ಸಾಹಿತ್ಯ ಸಮ್ಮೇಳನಗಳಲ್ಲಿ ನಾಡ ಗೀತೆ, ಕುಂದಾಪ್ರ ಕನ್ನಡ ಗೀತೆಗಳನ್ನು ಹಾಡುತ್ತಿದ್ದರು. ಭಾವಗೀತೆ, ಜಾನಪದ ಗೀತೆಗಳನ್ನು ಇವರ ಕಂಠದಲ್ಲಿ ಕೇಳುವುದೇ ಒಂದು ವಿಶೇಷ ಅನುಭವ.

    ಗಣೇಶ್ ಗಂಗೊಳ್ಳಿ ಉಡುಪಿ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾಗಿ ಉತ್ತಮ ಸಂಘಟಕರಾಗಿದ್ದರು. ಜಿಲ್ಲೆಯಾದ್ಯಂತ ಹಿರಿ-ಕಿರಿ ಜಾನಪದ ಕಲಾವಿದರನ್ನು ಒಗ್ಗೂಡಿಸುವಲ್ಲಿ ಶ್ರಮಿಸಿದ್ದರು. ಸಧ್ಯದಲ್ಲೇ ಉಡುಪಿಯಲ್ಲಿ ರಾಜ್ಯಮಟ್ಟದ ಜಾನಪದ ಸಮ್ಮೇಳನವೊಂದನ್ನು ನಡೆಸುವ ಬಗ್ಗೆ ತಯಾರಿ ನಡೆಸಿದ್ದರು. ಸುಮಾರು ಮೂರು ದಶಕ ಗಳಿಗೂ ಹೆಚ್ಚು ಕಾಲ ಜಾನಪದ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಗಣೇಶರಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ. ಇವರ ಅಗಲಿಕೆ ಸಾಂಸ್ಕೃತಿಕ ಲೋಕಕ್ಕೊಂದು ದೊಡ್ಡ ನಷ್ಟ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

    baikady folk Music roovari
    Share. Facebook Twitter Pinterest LinkedIn Tumblr WhatsApp Email
    Previous Articleಸನಾತನ ನಾಟ್ಯಾಲಯದಲ್ಲಿ ‘ನೃತ್ಯ ಸನಾತನ’ ಸರಣಿ ಕಾರ್ಯಕ್ರಮ
    Next Article ಉಡುಪಿ ರಾಜಾಂಗಣದಲ್ಲಿ ‘ಕಥಾಬಿಂದು ಸಾಹಿತ್ಯ ಸಮ್ಮೇಳನ 2026’ | ಏಪ್ರಿಲ್ 12
    roovari

    Add Comment Cancel Reply


    Related Posts

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    ವಿಶೇಷ ಲೇಖನ | ಮುಂಬೈ ಕನ್ನಡಿಗ, ಪತ್ರಕರ್ತನ ಸಾಧನೆ

    May 15, 2026

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.